ಕೇರಳದಲ್ಲಿ ನಮ್ಮ ಕಾರ್ಯಕರ್ತರ ವಿರುದ್ಧ ಹಿಂಸೆ ಸಹಿಸಿಕೊಳ್ಳುವುದಿಲ್ಲ: ಬಿಜೆಪಿ
ಕೇರಳದಲ್ಲಿ ನಮ್ಮ ಕಾರ್ಯಕರ್ತರ ವಿರುದ್ಧ ಹಿಂಸೆ ಸಹಿಸಿಕೊಳ್ಳುವುದಿಲ್ಲ ಎಂದು ಬಿಜೆಪಿ ಶಾನಿವಾರ ಹೇಳಿದ್ದು ಈ ದಾಳಿಗಳಿಗೆ ಎಡ ಪಕ್ಷಗಳೇ ಕಾರಣ ಎಂದಿದ್ದಾರೆ.

ನವದೆಹಲಿ: ಕೇರಳದಲ್ಲಿ ನಮ್ಮ ಕಾರ್ಯಕರ್ತರ ವಿರುದ್ಧ ಹಿಂಸೆ ಸಹಿಸಿಕೊಳ್ಳುವುದಿಲ್ಲ ಎಂದು ಬಿಜೆಪಿ ಶಾನಿವಾರ ಹೇಳಿದ್ದು ಈ ದಾಳಿಗಳಿಗೆ ಎಡ ಪಕ್ಷಗಳೇ ಕಾರಣ ಎಂದಿದ್ದಾರೆ.
"ರಾಷ್ಟ್ರೀಯ ಸ್ವಯಂಸೇವಕ ಸಂಘ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ಸರಣಿ ಹಿಂಸೆ ನಡೆಯುತ್ತಿದೆ. ಕಣ್ಣೂರು ಜಿಲ್ಲೆಯಲ್ಲೇ ವಿಧಾನಸಭಾ ಚುನಾವಣೆಗಳ ನಂತರ ಸಿಪಿಐ-ಎಂ ಕಾರ್ಯಕರ್ತರ ವಿರುದ್ಧ ೫೫ ಪ್ರಕರಣಗಳು ದಾಖಲಾಗಿವೆ" ಎಂದು ಭಾರತೀಯ ಜನತಾ ಪಕ್ಷದ ಮುಖಂಡ ಮತ್ತು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
"ಪ್ರಜಾಪ್ರಭುತ್ವದಲ್ಲಿ ಜನರಿಂದ ಆಯ್ಕೆಯಾದ ಮೇಲೆ ಸಿಪಿಐ-ಎಂ ಪಕ್ಷ ಸರಿಯಾದ ನಡತೆ ಪ್ರದರ್ಶಿಸುತ್ತದೆ ಎಂದು ನಿರೀಕ್ಷಿಸುತ್ತೇವೆ. ಕೇರಳದಲ್ಲಿ ಸ್ವಯಂಸೇಕರು ಮಾತು ಬಿಜೆಪಿ ಕಾರ್ಯಕರ್ತರ ವಿರುದ್ಧ ಹಿಂಸೆ ನಾವು ಸಹಿಸುವುದಿಲ್ಲ" ಎಂದು ಅವರು ಹೇಳಿದ್ದಾರೆ.
ತಮ್ಮ ಪಕ್ಷದ ಕಾರ್ಯಕರ್ತರ ಕುಟುಂಬಕ್ಕೆ ಸೇರಿದ ನಾಲ್ವರು ಮಹಿಳೆಯರೂ ಸೇರಿದಂತೆ ೨೬ ಬಿಜೆಪಿ ಮತ್ತು ಆರ್ ಎಸ್ ಎಸ್ ಸದಸ್ಯರನ್ನು ಈ ದಾಳಿಗಳ ನಂತರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪ್ರಸಾದ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


