ಫೇಸ್ ಬುಕ್ ನಲ್ಲಿ ನೆಹರು ಹೊಗಳಿಕೆ, ವೈರಲ್ ಆಯ್ತು ಪೋಸ್ಟ್: ಐಎಎಸ್ ಅಧಿಕಾರಿ ಎತ್ತಂಗಡಿ
ಮಧ್ಯಪ್ರದೇಶದ ಐಎಎಸ್ ಅಧಿಕಾರಿಯೊಬ್ಬರು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಮಾಜಿ ಪ್ರಧಾನಿ ದಿವಂಗತ ನೆಹರು ಅವರನ್ನು ಹೊಗಳಿದ ಹಿನ್ನೆಲೆಯಲ್ಲಿ ವರ್ಗಾವಣೆ ...

ಮಧ್ಯಪ್ರದೇಶ: ಮಧ್ಯಪ್ರದೇಶದ ಐಎಎಸ್ ಅಧಿಕಾರಿಯೊಬ್ಬರು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಮಾಜಿ ಪ್ರಧಾನಿ ದಿವಂಗತ ನೆಹರು ಅವರನ್ನು ಹೊಗಳಿದ ಹಿನ್ನೆಲೆಯಲ್ಲಿ ವರ್ಗಾವಣೆ ಗೊಂಡಿರುವ ಘಟನೆ ನಡೆದಿದೆ.
ಅಜಯ್ ಸಿಂಗ್ ಗ್ಯಾಂಗ್ ವಾರ್ ಫೇಸ್ ಬುಕ್ ನಲ್ಲಿ ಹಾಕಿದ ಪೋಸ್ಟ್ ವೈರಲ್ ಆದ ಹಿನ್ನೆಲೆಯಲ್ಲಿ ಅವರನ್ನು ವರ್ಗಾವಣೆಗಳಿಸಲಾಗಿದೆ. ನಂತರ ಹಿಂದಿಯಲ್ಲಿ ಹಾಕಿದ್ದ ಪೋಸ್ಟ್ ಅನ್ನು ಡಿಲೀಟ್ ಮಾಡಲಾಗಿದೆ.
ಜವಹರ್ ಲಾಲ್ ನೆಹರು ಅವರು ಮಾಡಿದ್ದ ತಪ್ಪಾದರೂ ಏನು, ಹಿಂದೂ ತಾಲಿಬಾನ್ ರಾಷ್ಟ್ರದಿಂದ ನಮ್ಮನ್ನು ರಕ್ಷಿಸಿದ್ದು ತಪ್ಪಾಯಿತೇ? ಐಐಟಿ, ಇಸ್ರೋ, ಬಿಎಆರ್ ಸಿ, ಬಿಎಚ್ ಇಎಲ್, ಸೇರಿದಂತೆ ಹಲವು ಸ್ಟೀಲ್ ಫ್ಲಾಂಟ್ ಗಳ, ಜಲಾಶಯಗಳು, ಶಕ್ತಿ ಉತ್ಪನ್ನ ಕೇಂದ್ರಗಳನ್ನು ಸ್ಥಾಪಿಸಿದ್ದು ಅವರ ತಪ್ಪೇ ಎಂದು ಪ್ರಶ್ನಿಸಿದ್ದಾರೆ.
ಹೀಗೆ ತಮ್ಮ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದ ಸ್ಟೇಟಸ್ ಅನ್ನು ಸಾವಿರಾರು ಮಂದಿ ಶೇರ್ ಮಾಡಿದ್ದರು. ಸೇವಾ ನಿಯಮ ಉಲ್ಲಂಘನೆ ಆರೋಪದ ಮೇಲೆ ಅವರನ್ನು ವರ್ಗಾವಣೆ ಮಾಡಲಾಗಿದೆ. ಕಳೆದ ಆಗಸ್ಟ್ ನಲ್ಲಿ ಗಾಂಗ್ವಾರ್ ಬದ್ವಾನಿ ಗೆ ನಿಯುಕ್ತಿಗೊಂಡಿದ್ದರು. ಏಕಾಏಕಿ ವರ್ಗಾವಣೆ ಮಾಡಿರುವ ಸರ್ಕಾರ ಯಾವುದೇ ವಿವರಣೆ ನೀಡಿಲ್ಲ.
ಇದನ್ನು ವಿರೋಧಿಸಿರುವ ಕಾಂಗ್ರೆಸ್, ಶಿವರಾಜ್ ಸಿಂಗ್ ಚೌಹಾನ್ ಸರ್ಕಾರದ ಅಸಹಿಷ್ಣುತೆ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


