ಪ್ರಧಾನ ಸುದ್ದಿ

ಹಿರಿಯ ಸಾಹಿತಿ, ನಾಡೋಜ ದೇ.ಜವರೇಗೌಡ ಇನ್ನಿಲ್ಲ

ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಸಾಹಿತಿ ಶತಾಯುಷಿ ನಾಡೋಜ ದೇ.ಜವರೇಗೌಡ ಅವರು ಸೋಮವಾರ ಸಂಜೆ ವಿಧಿವಶರಾಗಿದ್ದಾರೆ.

ಹಿರಿಯ ಸಾಹಿತಿ, ನಾಡೋಜ ದೇ.ಜವರೇಗೌಡ ಇನ್ನಿಲ್ಲ
ದೇ.ಜವರೇಗೌಡ
Published On :
ಮೈಸೂರು: ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಸಾಹಿತಿ ನಾಡೋಜ ದೇ.ಜವರೇಗೌಡ(98) ಅವರು ಸೋಮವಾರ ಸಂಜೆ ವಿಧಿವಶರಾಗಿದ್ದಾರೆ.
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ದೇಜಗೌ ಅವರನ್ನು ಇತ್ತೀಚಿಗೆ ನಗರದ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.
ದೇ.ಜ.ಗೌ ಎಂದು ಖ್ಯಾತಿಯಾಗಿದ್ದ ದೇ.ಜವರೇಗೌಡ ಅವರು ಕನ್ನಡದ ಪ್ರಮುಖ ಸಾಹಿತಿಗಳಲ್ಲಿ ಒಬ್ಬರಾಗಿದ್ದು, 1918ರ ಜುಲೈ ೮ರಂದು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚಕ್ಕರೆಯಲ್ಲಿ ದೇವೇಗೌಡ-ಚನ್ನಮ್ಮ ದಂಪತಿಗಳ ಮಗನಾಗಿ ಹುಟ್ಟಿದರು.
ರಾಷ್ಟ್ರಕವಿ ಕುವೆಂಪು ಅವರಿಂದ ಪ್ರಭಾವಿತರಾಗಿ,ಮೈಸೂರಿನಲ್ಲಿ ಕನ್ನಡ ಎಂ.ಎ. ಪದವಿ ಪಡೆದರು. 1946ರಲ್ಲಿ ಮೈಸೂರು ವಿಶ್ವವಿದ್ಯಾಲಯದ ಕನ್ನಡ ವಿಭಾಗದಲ್ಲಿ, ಕನ್ನಡ ಅಧ್ಯಾಪಕರಾದರು. ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಹುದ್ದೆ ಸೇರಿದಂತೆ ಅನೇಕ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಹುದ್ದೆಗಳನ್ನು ದೇಜಗೌ ನಿರ್ವಹಿಸಿದ್ದಾರೆ.
ದೇಜಗೌ ಕೃತಿಗಳು
ಸಾಹಿತ್ಯ:
ನಯಸೇನನ ‘ಧರ್ಮಾಮೃತ ಸಂಗ್ರಹ’, 1957
ಲಕ್ಷ್ಮೀಶನ ‘ಜೈಮಿನೀ ಭಾರತ’, 1959
ಕನಕದಾಸರ ‘ನಳಚರಿತ್ರೆ’, 1965
ಆಂಡಯ್ಯನ ‘ಕಬ್ಬಿಗರ ಕಾವ’, 1964
ಚಿಕ್ಕುಪಾಧ್ಯಾಯನ ‘ರುಕ್ಮಾಂಗದ ಚರಿತ್ರೆ’, 1982
ನೇಮಿಚಂದ್ರನ ‘ಲೀಲಾವತೀ ಪ್ರಬಂಧ’, (ಕೆ.ವೆಂಕಟರಾಮಪ್ಪನವರೊಂದಿಗೆ)

ಜಾನಪದ:
‘ಜಾನಪದ ಅಧ್ಯಯನ’, 1976
‘ಜಾನಪದ ಸೌಂದರ್ಯ’, 1977
‘ಜಾನಪದ ವಾಹಿನಿ’, 1983
‘ಜನಪದ ಗೀತಾಂಜಲಿ’, 1978, (ಸಂಪಾದಿತ ಕೃತಿ)
ಭಾಷಾಂತರಗಳು
‘ಹಮ್ಮು ಮತ್ತು ಬಿಮ್ಮು,’ (ಜೇನ್ ಆಸ್ಟಿನ್ ಅವರ ಪ್ರೈಡ್ ಅಂಡ್ ಪ್ರಿಜುಡೀಸ್)
‘ನೆನಪು ಕಹಿಯಲ್ಲ’, (ಕೃಷ್ಣಾ ಹಥೀಸಿಂಗ್ ಅವರ ವಿತ್ ನೋ ರಿಗ್ರೆಟ್ಸ್)
‘ಆನಾ ಕೆರಿನಿನಾ’ (ಲಿಯೋ ಟಾಲ್ ಸ್ಟಾಯ್ ಅವರ ಕಾದಂಬರಿ)
‘ಯುದ್ಧ ಮತ್ತು ಶಾಂತಿ’, (ಲಿಯೋ ಟಾಲ್ ಸ್ಟಾಯ್ ಅವರ ವಾರ್ ಅಂಡ್ ಪೀಸ್)
‘ಪುನರುತ್ಥಾನ’ (ಲಿಯೋ ಟಾಲ್ ಸ್ಟಾಯ್ ಅವರ ರಿಸರೆಕ್ಷನ್)
ಸಾಹಿತಿಗಳ ಸಂಗದಲ್ಲಿ
ಹೋರಾಟದ ಬದುಕು (ಆತ್ಮಕಥೆ)
ಮೋತಿಲಾಲ್ ನೆಹರೂ
ರಾಷ್ಟ್ರಕವಿ ಕುವೆಂಪು
ತೀನಂಶ್ರೀ
ರಾಮಾಯಣ ದರ್ಶನಂ ವಚನ ಚಂದ್ರಿಕೆ
ಕುವೆಂಪು ಸಾಹಿತ್ಯದ ಮೇಲೆ ಹೆಚ್ಚು ಲೇಖನಗಳನ್ನು, ಕೃತಿಗಳನ್ನು ಬರೆದಿದ್ದಾರೆ.
ಜಾನಪದ ಅಧ್ಯಯನ
ಶ್ರೀ ಬಸವೇಶ್ವರರು

ಪ್ರಶಸ್ತಿ/ಪುರಸ್ಕಾರಗಳು
ದೇ. ಜ. ಗೌ. ಅವರು ಸರ್ಕಾರ ಮತ್ತು ಸಾರ್ವಜನಿಕರಿಂದ ಅನೇಕ ಪ್ರಶಸ್ತಿಗಳನ್ನೂ ಸನ್ಮಾನಗಳನ್ನೂ ಪಡೆದಿದ್ದಾರೆ.
ಕರ್ನಾಟಕ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್,
ಕರ್ನಾಟಕ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ,
ಕರ್ನಾಟಕ ಸರ್ಕಾರದ ರಾಜ್ಯೋತ್ಸವ ಪ್ರಶಸ್ತಿ,
ತಿರುವನಂತಪುರದ ‘ದ್ರವಿಡಿಯನ್ ಲಿಂಗ್ವಿಸ್ಟಿಕ್ಸ್ ಅಸೋಷಿಯೇಶನ್’ನ ಸೀನಿಯರ್ ಫೆಲೋ ಪ್ರಶಸ್ತಿ,
ಕರ್ನಾಟಕ ಸರ್ಕಾರದ ಪಂಪ ಪ್ರಶಸ್ತಿ
ಕನ್ನಡ ವಿಶ್ವವಿದ್ಯಾಲಯದ ನಾಡೋಜ ಪ್ರಶಸ್ತಿ
ಕನ್ನಡ ಸಾಹಿತ್ಯ ಪರಿಷತ್ತಿನ ನೃಪತುಂಗ ಪ್ರಶಸ್ತಿ
೨೦೦೮ರ ಕರ್ನಾಟಕ ರತ್ನ ಪ್ರಶಸ್ತಿಯನ್ನು ಸರ್ಕಾರ ೨೦೧೦ರಲ್ಲಿ ಘೋಷಿಸಿದೆ.
ಅವರು 1970ರಲ್ಲಿ ಬೆಂಗಳೂರಿನಲ್ಲಿ ನಡೆದ 47ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
‘ಅಂತಃಕರಣ’, ‘ರಸಷಷ್ಠಿ’, ‘ದೇಜಗೌ-ವ್ಯಕ್ತಿ ಮತ್ತು ಸಾಹಿತ್ಯ’, ‘ಅಪೂರ್ವ’ ಮತ್ತು ‘ನಮ್ಮ ನಾಡೋಜ’ಗಳು ಅವರಿಗೆ ಸಂದಿರುವ ಅಭಿನಂದನ ಗ್ರಂಥಗಳು.
ಕರ್ನಾಟಕ ವಿಶ್ವವಿದ್ಯಾನಿಲಯ ೧೯೭೫ ರಲ್ಲಿ ಗೌರವ ಡಾಕ್ಟರೇಟ್ ಪುರಸ್ಕಾರ ನೀಡಿ ಗೌರವಿಸಿತು.
ಕರ್ನಾಟಕ ಸರ್ಕಾರ ೨೦೧೦ ರಲ್ಲಿ ೨೦೦೮ನೇ ಸಾಲಿನ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.