ಪ್ರಧಾನ ಸುದ್ದಿ

ರಾಜ್ಯದಲ್ಲಿ ಭೀಕರ ಬರ: ವಿಶೇಷ ಪ್ಯಾಕೇಜ್‌ಗೆ ಬಿಜೆಪಿ ಆಗ್ರಹ

ರಾಜ್ಯ ಭೀಕರ ಬರಗಾಲಕ್ಕೆ ತುತ್ತಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ವಿಶೇಷ ಪ್ಯಾಕೇಜ್‌ ನೀಡುವ ಮೂಲಕ ರಾಜ್ಯದ ಅನ್ನದಾತರ....

ರಾಜ್ಯದಲ್ಲಿ ಭೀಕರ ಬರ: ವಿಶೇಷ ಪ್ಯಾಕೇಜ್‌ಗೆ ಬಿಜೆಪಿ ಆಗ್ರಹ
ಮನವಿ ಸಲ್ಲಿಸುತ್ತಿರುವ ಜಗದೀಶ್ ಶೆಟ್ಟರ್
Published On :
ಬೆಂಗಳೂರು: ರಾಜ್ಯ ಭೀಕರ ಬರಗಾಲಕ್ಕೆ ತುತ್ತಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ವಿಶೇಷ ಪ್ಯಾಕೇಜ್‌ ನೀಡುವ ಮೂಲಕ ರಾಜ್ಯದ ಅನ್ನದಾತರ ನೆರವಿಗೆ ಧಾವಿಸಬೇಕು ಎಂದು ಬಿಜೆಪಿ ನಿಯೋಗವು ಕೇಂದ್ರ ಅಧ್ಯಯನ ತಂಡಕ್ಕೆ ಶನಿವಾರ ಮನವಿ ಮಾಡಿದೆ. 
ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ನೇತೃತ್ವದ ನಿಯೋಗ ಕೇಂದ್ರ ಕೃಷಿ ಇಲಾಖೆಯ ಜಂಟಿ ಕಾರ್ಯದರ್ಶಿ ನಿರಾಜಾ ಅದಿದಮ ನೇತೃತ್ವದ ಅಧಿಕಾರಿಗಳ ತಂಡವನ್ನು ಭೇಟಿ ಮಾಡಿ, ಕರ್ನಾಟಕಕ್ಕೆ ವಿಶೇಷ ಪ್ಯಾಕೇಜ್ ನೀಡುವಂತೆ ಒತ್ತಾಯಿಸಿತು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶೆಟ್ಟರ್, ರಾಜ್ಯದ 30 ಜೆಲ್ಲೆಗಳ  176 ತಾಲೂಕುಗಳ ಪೈಕಿ 139 ತಾಲೂಕುಗಳನ್ನು ರಾಜ್ಯ ಸರ್ಕಾರ ಈಗಾಗಲೇ ಬರ
ಪೀಡಿತ ಎಂದು ಘೋಷಿಸಿದೆ. 747 ಹೋಬಳಿ, 5628 ಗ್ರಾಮ ಪಂಚಾಯಿತಿಗಳನ್ನು ಹೊಂದಿರುವ ರಾಜ್ಯದಲ್ಲಿ ಶೇ.76ರಷ್ಟು ಮಳೆ ಆಧಾರಿತ ಕೃಷಿ ಬೆಳೆಗಳನ್ನು ಬೆಳೆಯಲಾಗುತ್ತದೆ. ಪ್ರಮುಖ ಬೆಳೆಗಳಾದ ರಾಗಿ, ಭತ್ತ, ಶೇಂಗಾ, ಮೆಕ್ಕೆಜೋಳ, ತೊಗರಿ, ಅಡಿಕೆ, ಬಾಳೆ, ನೆಲಗಡಲೆ, ಈರುಳ್ಳಿ, ಕಬ್ಬು, ತಂಬಾಕು, ತೈಲ ಬೀಜಗಳು ಸೇರಿದಂತೆ ವಿವಿಧ ರೀತಿಯ ಬೆಳೆಗಳು ಮಳೆ ಇಲ್ಲದ ಪರಿಣಾಮ ಸಂಪೂರ್ಣವಾಗಿ ಒಣಗಿ ಹೋಗಿವೆ ಎಂದು ಮನವಿಯಲ್ಲಿ ವಿವರಿಸಲಾಗಿದೆ ಎಂದರು.
ಕೇಂದ್ರದ ಅಧಿಕಾರಿಗಳ ತಂಡಕ್ಕೆ ವಾಸ್ತವ ಸ್ಥಿತಿಯನ್ನು ಅಂಕಿ-ಸಂಖ್ಯೆಗಳ ಸಮೇತ ಮನವರಿಕೆ ಮಾಡಿಕೊಡಲಾಗಿದೆ. ಬರಗಾಲದಿಂದ ರಾಜ್ಯದ 13 ಪ್ರಮುಖ ಜಲಾಶಯಗಳಲ್ಲಿ ಶೇ.60ಕ್ಕಿಂತಲೂ ನೀರು ಕಡಿಮೆ ಇದೆ. ಲಿಂಗನಮಕ್ಕಿ, ಸೂಪಾ ಸೇರಿದಂತೆ ಮತ್ತಿತರ ಕಡೆ ವಿದ್ಯುತ್‌ ಉತ್ಪಾದನೆ ಮಾಡುವಷ್ಟು ನೀರು ಸಂಗ್ರಹವಾಗಿಲ್ಲ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.31ರಷ್ಟು ಮಳೆಯ ಕೊರತೆ ಎದುರಾಗಿದೆ. ಜೂನ್‌ನಿಂದ ಅಕ್ಟೋಬರ್‌ ಅಂತ್ಯದವರೆಗೆ ರಾಜ್ಯದ ಯಾವುದೇ ಪ್ರಮುಖ ಜಲಾಶಯಗಳು ಭರ್ತಿಯಾಗಿಲ್ಲ ಎಂದು ಶೆಟ್ಟರ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.