ಬಿ-ಫಾರ್ಮ್ ಗೆ ಜಯಾ ಹೆಬ್ಬೆಟ್ಟು ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ವಜಾ
ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು...

Published On :
ಚೆನ್ನೈ: ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಬಿ-ಫಾರ್ಮ್ ಗಳಿಗೆ ಹೆಬ್ಬೆಟ್ಟು ಒತ್ತಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮಂಗಳವಾರ ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ.
ಚುನಾವಣಾ ಪತ್ರಗಳಿಗೆ ಹೆಬ್ಬೆಟ್ಟು ಒತ್ತುವುದು ಕಾನೂನು ಬಾಹಿರ ಮತ್ತು ಸಂವಿಧಾನಕ್ಕೆ ವಿರುದ್ಧವಾದದ್ದು ಎಂದು ಘೋಷಿಸುವಂತೆ ಸಾಮಾಜಿಕ ಕಾರ್ಯಕರ್ತ ಟ್ರಾಫಿಕ್ ರಾಮಸ್ವಾಮಿ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಕೋರ್ಟ್, ಬಿ-ಫಾರ್ಮ್ ಗಳ ದೃಢಿಕರಣದ ಕುರಿತು ಚುನಾವಣಾ ಆಯೋಗ ಪರಿಶೀಲಿಸಲಿದೆ ಎಂದು ಹೇಳಿದೆ.
ಹೆಬ್ಬೆಟ್ಟು ಒತ್ತುವುದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗುತ್ತದೆ ಎಂದು ರಾಮಸ್ವಾಮಿ ಅವರು ತಮ್ಮ ಅರ್ಜಿಯಲ್ಲಿ ವಾದಿಸಿದ್ದರು.
ತಮಿಳುನಾಡಿನ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನ.19ರಂದು ಚುನಾವಣೆ ನಡೆಯುತ್ತಿದ್ದು, ಎಐಎಡಿಎಂಕೆ ಅಭ್ಯರ್ಥಿಗಳಿಗೆ ಜಯಲಲಿತಾ ಅವರು ಸಹಿ ಮಾಡುವ ಬದಲು ಹೆಬ್ಬೆಟ್ಟು ಒತ್ತಿ ಬಿ-ಫಾರ್ಮ್ ಗಳನ್ನು ವಿತರಿಸಲಾಗಿದೆ.
ಅನಾರೋಗ್ಯಪೀಡಿತರಾಗಿ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜಯಲಲಿತಾ ಅವರಿಗೆ ಕೃತಕ ಉಸಿರಾಟದ ನಳಿಕೆ ಅಳವಡಿಸಿರುವುದರಿಂದ ಅವರು ಸಹಿ ಮಾಡುವ ಸ್ಥಿತಿಯಲ್ಲಿ ಇಲ್ಲ. ಹೀಗಾಗಿ ಅಭ್ಯರ್ಥಿಗಳ ಬಿ-ಫಾರ್ಮ್ಗೆ ಹೆಬ್ಬೆಟ್ಟು ಒತ್ತಿದ್ದಾರೆ.
ಮಾನ್ಯತೆ ಪಡೆದ ಪಕ್ಷದ ಅಭ್ಯರ್ಥಿಗಳಾಗಿ ಸ್ಪರ್ಧಿಸುವವರು ಅರ್ಜಿ ತುಂಬಿ, ಪಕ್ಷದ ಮುಖ್ಯಸ್ಥರಿಂದ ಸಹಿ ಮಾಡಿಸಬೇಕು ಎಂದು ಚುನಾವಣಾ ಆಯೋಗದ ನಿಯಮ ಹೇಳುತ್ತದೆ. ನಕಲು ಸಹಿ ಅಥವಾ ರಬ್ಬರ್ ಸ್ಟಾಂಪ್‌ಗೆ ಅವಕಾಶವಿರುವುದಿಲ್ಲ. ಹೀಗಾಗಿ ಜಯಾ ಅವರು ತಮ್ಮ ಎಡಗೈ ಹೆಬ್ಬೆಟ್ಟು ಒತ್ತಿ ಬಿ-ಫಾರ್ಮ್ ವಿತರಿಸಿದ್ದಾರೆ.
ಕೃತಕ ಉಸಿರಾಟ ವ್ಯವಸ್ಥೆಯಿಂದಾಗಿ ಜಯಾ ಅವರ ಬಲಗೈ ಊದಿಕೊಂಡಿರುವುದರಿಂದ ಅವರು ಸಹಿ ಮಾಡುವ ಸ್ಥಿತಿಯಲ್ಲಿಲ್ಲ. ಹೀಗಾಗಿ ತಮ್ಮ ಎದುರೇ ಅವರು ಹೆಬ್ಬೆಟ್ಟು ಒತ್ತಿದ್ದಾರೆ ಎಂದು ಮದ್ರಾಸ್ ವೈದ್ಯ ಕಾಲೇಜಿನ ಡಾ| ಪಿ. ಬಾಲಾಜಿ ಅವರು ಅ.27ರಂದು ಪ್ರಮಾಣಿಕರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


