ಖಳನಟರ ಮೃತದೇಹ ಶೋಧಕ್ಕೆ ನೌಕಾಪಡೆ ಸಹಾಯ
ಸತತ 27 ಗಂಟೆಗಳ ಕಾರ್ಯಾಚರಣೆಯಲ್ಲಿ ಖಳನಟ ಅನಿಲ್ ಮತ್ತು ಉದಯ್ ಅವರ ಮೃತದೇಹಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ನೌಕಾಪಡೆ ಸಹಾಯ ಕೋರುವಂತೆ...

Published On :
ಬೆಂಗಳೂರು: ಸತತ 27 ಗಂಟೆಗಳ ಕಾರ್ಯಾಚರಣೆಯಲ್ಲಿ ಖಳನಟ ಅನಿಲ್ ಮತ್ತು ಉದಯ್ ಅವರ ಮೃತದೇಹಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ನೌಕಾಪಡೆ ಸಹಾಯ ಕೋರುವಂತೆ ರಾಜ್ಯ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಅಗ್ನಿಶಾಮಕ ಸೇವೆ ಮಹಾನಿರ್ದೇಶಕ ಎಂಎನ್ ರೆಡ್ಡಿ ಅವರಿಗೆ ಸೂಚಿಸಿದ್ದಾರೆ.
ದುನಿಯಾ ವಿಜಯ್ ಅಭಿನಯದ ಮಾಸ್ತಿಗುಡಿ ಚಿತ್ರದ ಕ್ಲೈಮ್ಯಾಕ್ಸ್ ಶೂಟಿಂಗ್ ವೇಳೆ ತಿಪ್ಪಗೊಂಡನಹಳ್ಳಿ ಜಲಾಶಯದ ನೀರಿನಲ್ಲಿ ಮುಳುಗಿ ಮೃತಪಟ್ಟಿದ ಖಳನಟ ಅನಿಲ್ ಮತ್ತು ಉದಯ್ ಅವರ ಮೃತದೇಹಗಳು ಇನ್ನು ಪತ್ತೆಯಾಗದರಿಂದ ಅವಶ್ಯಕತೆ ಬಿದ್ದರೆ ಕಾರವಾರ ನೌಕಾಪಡೆ ನುರಿತ ಈಜುಗಾರರ ಸಹಾಯ ಕೋರುವುದಾಗಿ ಹೇಳಿದ್ದಾರೆ.
ಶೋಧ ಕಾರ್ಯಾಚರಣೆಗೆ ನುರಿತ ಈಜುಗಾರರನ್ನು ಕಳುಹಿಸಿಕೊಡುವಂತೆ ಪ್ರಧಾನ ಇನ್ಸ್ ಪೆಕ್ಟರ್(ಪಶ್ಚಿಮ) ಅರುಣ್ ಚಕ್ರವರ್ತಿ ಅವರಿಗೆ ಸೂಚಿಸಲಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


