ಜಯಲಲಿತಾ ಸಂಪೂರ್ಣ ಗುಣಮುಖ, ಡಿಸ್ಚಾರ್ಜ್ ದಿನಾಂಕ ಇನ್ನೂ ನಿಗದಿ ಮಾಡಿಲ್ಲ: ಆಸ್ಪತ್ರೆ
ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ...

Published On :
ಚೆನ್ನೈ: ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಈಗ ಸಂಪೂರ್ಣ ಗುಣಮುಖರಾಗಿದ್ದು, ಡಿಸ್ಚಾರ್ಜ್ ಮಾಡುವ ದಿನಾಂಕ ಇನ್ನೂ ನಿಗದಿ ಮಾಡಿಲ್ಲ ಎಂದು ಆಸ್ಪತ್ರೆಯ ಅಧ್ಯಕ್ಷ ಡಾ.ಪ್ರತಾಪ್ ಸಿ. ರೆಡ್ಡಿ ಅವರು ಶನಿವಾರ ಹೇಳಿದ್ದಾರೆ.
ಇಂದು ವರದಿಗಾರರೊಂದಿಗೆ ಮಾತನಾಡಿದ ರೆಡ್ಡಿ ಅವರು, ನಾನು ಈಗಾಗಲೇ ಹೇಳಿದಂತೆ ಅವರ ಸೋಂಕು ಸಂಪೂರ್ಣ ನಿಯಂತ್ರಣದಲ್ಲಿ. ಆದರೆ ಅವರು ಇನ್ನಷ್ಟು ಪುನಶ್ಚೇತನಗೊಳ್ಳುವ ಅಗತ್ಯ ಇದೆ. ಹೀಗಾಗಿ ಮುಖ್ಯಮಂತ್ರಿಯವರ ಆರೋಗ್ಯದಲ್ಲಿನ ಬೆಳವಣಿಗೆಯನ್ನು ಆಧರಿಸಿ ಡಿಸ್ಚಾರ್ಜ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಎಐಎಡಿಎಂಕೆ ಪಕ್ಷದ ಹಿರಿಯ ಮುಖಂಡ ಪೊನ್ನಯ್ಯನ್ ಅವರು, ಜಯಲಲಿತಾ ಅವರು ಮನೆಗೆ ಹೋದರೆ ಮನೆಯಲ್ಲಿ ಸುಮ್ಮನೇ ಕೂರುವವರಲ್ಲ. ಅದೂ ಇದೂ ಕೆಲಸದಲ್ಲಿ ತೊಡಗಿಕೊಳ್ಳುತ್ತಾರೆ. ಅದರಿಂದ ಅವರಿಗೆ ಆಯಾಸವಾಗಬಹುದು. ಹೀಗಾಗಿ ಅವರು ಇನ್ನೂ ಕೆಲ ಸಮಯ ಆಸ್ಪತ್ರೆಯಲ್ಲೇ ಇರಲಿ ಎಂದು ಹೇಳಿದ್ದಾರೆ.
ತೀವ್ರ ಜ್ವರ ಹಾಗೂ ನಿರ್ಜಲೀಕರಣದಿಂದ ಬಳಲುತ್ತಿದ್ದ ಜಯಲಲಿತಾ ಅವರು ಕಳೆದ ಸೆಪ್ಟೆಂಬರ್ 22ರಂದು ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದು, ಅಂದಿನಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


