ಪ್ರಧಾನ ಸುದ್ದಿ

ಬುರ್ಖಾ ನಿಷೇಧ ಅರ್ಜಿಯನ್ನು ವಜಾ ಮಾಡಿದ ದೆಹಲಿ ಹೈಕೋರ್ಟ್

ಭದ್ರತಾ ಕಾರಣಗಳಿಗಾಗಿ ಮತ್ತು ಹೆಚ್ಚುತ್ತಿರುವ ಭಯೋತ್ಪಾದಕ ಚಟುವಟಿಕೆಗಳನ್ನು ಮುಂದಿಟ್ಟುಕೊಂಡು, ಸಾರ್ವಜನಿಕ ಪ್ರದೇಶಗಳಲ್ಲಿ ಬುರ್ಖಾ, ಹೆಲ್ಮೆಟ್ ಮತ್ತು ಮುಖ ಕವಚ ಧರಿಸುವುದನ್ನು

ಬುರ್ಖಾ ನಿಷೇಧ ಅರ್ಜಿಯನ್ನು ವಜಾ ಮಾಡಿದ ದೆಹಲಿ ಹೈಕೋರ್ಟ್
ಸಾಂದರ್ಭಿಕ ಚಿತ್ರ
Published On :
ನವದೆಹಲಿ: ಭದ್ರತಾ ಕಾರಣಗಳಿಗಾಗಿ ಮತ್ತು ಹೆಚ್ಚುತ್ತಿರುವ ಭಯೋತ್ಪಾದಕ ಚಟುವಟಿಕೆಗಳನ್ನು ಮುಂದಿಟ್ಟುಕೊಂಡು, ಸಾರ್ವಜನಿಕ ಪ್ರದೇಶಗಳಲ್ಲಿ ಬುರ್ಖಾ, ಹೆಲ್ಮೆಟ್ ಮತ್ತು ಮುಖ ಕವಚ ಧರಿಸುವುದನ್ನು ನಿಷೇಧಿಸುವಂತೆ ಕೋರಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ವಜಾ ಮಾಡಿದೆ. 
ಮುಖ್ಯ ನ್ಯಾಯಾಧೀಶೆ ಜಿ ರೋಹಿಣಿ ಮತ್ತು ನ್ಯಾಯಾಧೀಶೆ ಸಂಗೀತ ಧಿಂಗ್ರಾ ಸೆಹಗಲ್ ಅವರನ್ನು ಒಳಗೊಂಡ ವಿಭಾಗೀಯ ಪೀಠ, ದೆಹಲಿ ನಿವಾಸಿ ಸರ್ದಾರ್ ರವಿ ರಂಜನ್ ಸಿಂಗ್ ಸಲ್ಲಿಸಿದ್ದ ಸಾರ್ವಜನಿಕ ಅರ್ಜಿಯವನ್ನು ವಜಾ ಮಾಡಿದ್ದು ಇದು ಸಾರ್ವಜನಿಕ ಹಿತಾಸಕ್ತಿಗೆ ಒಳಪಟ್ಟಿದ್ದಲ್ಲ ಎಂದಿದೆ. 
ಮುಖ ಕವಚ ಮತ್ತು ಸಂಪೂರ್ಣ ದೇಹವನ್ನು ಹೊದೆಯುವ ಬುರ್ಖಾ ಭದ್ರತಾ ಭೀತಿಯನ್ನು ಸೃಷ್ಟಿಸಿದೆ ಮತ್ತು ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.