ಪ್ರಧಾನ ಸುದ್ದಿ

ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ: ಕನ್ನಡಿಗರಿಗೆ ಶಿವಸೇನೆ ಎಚ್ಚರಿಕೆ

ಕರ್ನಾಟಕದಲ್ಲಿರುವ ಮರಾಠಿಗರ ಮೇಲೆ ದಬ್ಬಾಳಿಕೆ ನಡೆಸಿದರೆ ಮಹಾರಾಷ್ಟ್ರದಲ್ಲಿರುವ ಕನ್ನಡಿಗರು ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ...

ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ: ಕನ್ನಡಿಗರಿಗೆ ಶಿವಸೇನೆ ಎಚ್ಚರಿಕೆ
ಸಾಂದರ್ಭಿಕ ಚಿತ್ರ
Published On :
ಬೆಳಗಾವಿ: ಕರ್ನಾಟಕದಲ್ಲಿರುವ ಮರಾಠಿಗರ ಮೇಲೆ ದಬ್ಬಾಳಿಕೆ ನಡೆಸಿದರೆ ಮಹಾರಾಷ್ಟ್ರದಲ್ಲಿರುವ ಕನ್ನಡಿಗರು ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕೊಲ್ಲಾಪುರ ಜಿಲ್ಲಾ ಶಿವಸೇನಾ ಅಧ್ಯಕ್ಷ ವಿಜಯ್ ದೇವಾನೆ ಅವರು ಸೋಮವಾರ ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ ವಿರೋಧಿಸಿ ಮಹಾರಾಷ್ಟ್ರ ಏಕಿಕರಣ ಸಮಿತಿ(ಎಂಇಎಸ್) ಆಯೋಜಿಸಿದ್ದ ಮಹಾ ಮೇಳವ ಉದ್ದೇಶಿಸಿ ಮಾತನಾಡಿದ ದೇವಾನೆ ಅವರು, ಕರ್ನಾಟಕ ಪೊಲೀಸರು ಮರಾಠಿಗರ ಮೇಲೆ ದೌರ್ಜನ್ಯ ನಡೆಸಿದ್ದಾರೆ ಮತ್ತು ಅವರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸುತ್ತಿರುವುದು ಬೆಳಕಿಗೆ ಬಂದ ನಂತರ ಮಹಾರಾಷ್ಟ್ರದಲ್ಲಿ ಕರ್ನಾಟಕ ಬಸ್ ಗಳಿಗೆ ತಡೆ ನೀಡಲಾಗಿದೆ. ಆದರೆ ಕರ್ನಾಟಕ ಸರ್ಕಾರ ಇದೇ ರೀತಿ ಮರಾಠಿಗರ ಮೇಲೆ ದೌರ್ಜನ್ಯ ಮುಂದುವರೆಸಿದರೆ ನಾವು ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ಹೋಟೆಲ್ ಗಳನ್ನು ಬಂದ್ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಗಡಿಂಗಲಜದಿಂದ ಚಂದಗಡದವರೆಗೆ ಇರುವ ಕನ್ನಡಿಗರ ಮನೆಗಳನ್ನು ಹೊಡೆದು ಹಾಕುವ ಮೂಲಕ ನಾವು ಏನು ಎಂಬುದು ಕರ್ನಾಟಕಕ್ಕೆ ತೋರಿಸುತ್ತೇವೆ ಎಂದು ದೇವಾನೆ ಗುಡುಗಿದ್ದಾರೆ.
ಈ ಮಹಾಮೇಳದಲ್ಲಿ ಮಹಾರಾಷ್ಟ್ರ ಮಾಜಿ ಸಚಿವ ಎನ್.ಡಿ.ಪಾಟೀಲ್, ಕರ್ನಾಟಕದ ಶಾಸಕರಾದ ಶಂಬಾಜಿರಾವ್ ಪಾಟೀಲ್ ಹಾಗೂ ಅರವಿಂದ್ ಪಾಟೀಲ್ ಸೇರಿದಂತೆ ಹಲವರು ಭಾಗವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.