ಜಯಲಲಿತಾ ಮಾತನಾಡುತ್ತಿದ್ದಾರೆ: ಅಪೋಲೋ ಆಸ್ಪತ್ರೆ
ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು...

Published On :
ಚೆನ್ನೈ: ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಈಗ ಸ್ವೀಕರ್ ಬಳಸಿ ಮಾತನಾಡುತ್ತಿದ್ದಾರೆ ಎಂದು ಆಸ್ಪತ್ರೆಯ ಅಧ್ಯಕ್ಷ ಡಾ. ಪ್ರತಾಪ್ ಸಿ.ರೆಡ್ಡಿ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರೆಡ್ಡಿ ಅವರು, ಜಯಲಲಿತಾ ಅವರು ಸಹಜವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ಈಗ ಕೆಲವು ನಿಮಿಷಗಳ ಕಾಲ ಸ್ಪೀಕರ್ ಬಳಸಿ ಮಾತನಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಅಲ್ಲದೆ ಈ ಸ್ಪೀಕರ್ ಸಹಾಯ ಕೇವಲ ತಾತ್ಕಾಲಿಕ ಅಷ್ಟೇ ಎಂದು ಹೇಳಿದ್ದಾರೆ.
ಇದೇ ವೇಳೆ ಮುಖ್ಯಮಂತ್ರಿಗಳನ್ನು ಯಾವಾಗ ಡಿಸ್ಚಾರ್ಜ್ ಮಾಡುತ್ತೀರಿ? ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ರೆಡ್ಡಿ, ಅವರಿಗೆ ತಾವು ಸಂಪೂರ್ಣ ಗುಣಮುಖರಾಗಿರುವುದಾಗಿ ಅನಿಸಿದರೆ ಹೋಗಬಹುದು ಎಂದರು.
ತೀವ್ರ ಜ್ವರ ಹಾಗೂ ನಿರ್ಜಲೀಕರಣದಿಂದ ಬಳಲುತ್ತಿದ್ದ ಜಯಲಲಿತಾ ಅವರು ಕಳೆದ ಸೆಪ್ಟೆಂಬರ್ 22ರಂದು ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


