ಡಿ.ಕೆ.ರವಿ ಸಾವು: ರಾಜ್ಯ ಸರ್ಕಾರಕ್ಕೆ ಸಿಬಿಐ ತನಿಖಾ ವರದಿ ಸಲ್ಲಿಕೆ
ಐಎಎಸ್ ಅಧಿಕಾರಿ ಡಿ.ಕೆ ರವಿ ಅವರ ನಿಗೂಢ ಸಾವಿನ ಪ್ರಕರಣದ ತನಿಖೆ ನಡೆಸಿದ ಸಿಬಿಐ 20 ತಿಂಗಳ ನಂತರ ವರದಿ ನೀಡಿದ್ದು, ಅದನ್ನು...

Published On :
ಬೆಂಗಳೂರು: ಐಎಎಸ್ ಅಧಿಕಾರಿ ಡಿ.ಕೆ ರವಿ ಅವರ ನಿಗೂಢ ಸಾವಿನ ಪ್ರಕರಣದ ತನಿಖೆ ನಡೆಸಿದ ಸಿಬಿಐ 20 ತಿಂಗಳ ನಂತರ ವರದಿ ನೀಡಿದ್ದು, ಅದನ್ನು ಬೆಂಗಳೂರು ದಕ್ಷಿಣ ವಿಭಾಗದ ಸಹಾಯಕ ಆಯುಕ್ತ ಟಿ.ಡಿ ನಟೇಶ್ ಅವರು ಶನಿವಾರ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದಾರೆ.
ಟಿ.ಡಿ ನಟೇಶ್ ಅವರು ಇಂದು ವಿಧಾನಸಭೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಭಾಷ್‌ಚಂದ್ರ ಕುಂಟಿಯಾ ಅವರನ್ನು ಭೇಟಿ ಮಾಡಿ ಸುಮಾರು 90 ಪುಟಗಳ ವರದಿಯನ್ನು ಸಲ್ಲಿಸಿದರು.
ವರದಿ ಸಲ್ಲಿಸಿದ ಬಳಿಕ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ನಟೇಶ್ ಅವರು, ಸಿಬಿಐ ಸಲ್ಲಿಸಿದ ತನಿಖಾ ವರದಿಯ ಒಂದು ಪ್ರತಿಯನ್ನು ಸರ್ಕಾರಕ್ಕೆ ಸಲ್ಲಿಸಿರುವುದಾಗಿ ಮಾತ್ರ ತಿಳಿಸಿದರು,
ವೈಯಕ್ತಿಕ ಕಾರಣಗಳಿಂದಾಗಿಯೇ ಡಿ.ಕೆ ರವಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಿಬಿಐ ತನ್ನ ವರದಿಯಲ್ಲಿ ಸಷ್ಪಪಡಿಸಿದೆ. ಯಾವುದೇ ಒಂದು ಅಸ್ವಾಭಾವಿಕ ಸಾವಿನ ಪ್ರಕರಣದಲ್ಲಿ ತನಿಖೆ ಮುಗಿದ ನಂತರ ವರದಿಯನ್ನು ಮ್ಯಾಜಿಸ್ಟ್ರೇಟ್ ಗೆ ಸಲ್ಲಿಸುವುದು ವಾಡಿಕೆ. ಆದರೆ ಈ ಪ್ರಕರಣದಲ್ಲಿ ಅಸಿಸ್ಟೆಂಟ್ ಕಮಿಷನರ್ ಗೆ ವರದಿ ಸಲ್ಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಾರ್ಚ್ 16, 2015 ರಂದು ಐಎಎಸ್ ಅಧಿಕಾರಿ ಡಿ.ಕೆ ರವಿ ತಮ್ಮ ಫ್ಲ್ಯಾಟ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಅನಂತರ ಡಿ.ಕೆ ರವಿ ಅವರದ್ದು ಆತ್ಮಹತ್ಯೆಯಲ್ಲ ಕೊಲೆ ಎಂದು ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದಿದ್ದವು. ಪ್ರತಿಪಕ್ಷಗಲು ಕೂಡ ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಆರೋಪಿಸಿದ್ದವು. ಅಲ್ಲದೆ ಪ್ರಕರಣವನ್ನು ಸಿಬಿಐ ವಹಿಸುವಂತೆ ಒತ್ತಾಯಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


