ಲೋಕಾ ಭ್ರಷ್ಟಾಚಾರ: ನ್ಯಾ.ಭಾಸ್ಕರ್ ರಾವ್ ನ್ಯಾಯಾಲಯಕ್ಕೆ ಹಾಜರು, ಮಧ್ಯಂತರ ಜಾಮೀನು
ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ನಿವೃತ್ತ ನ್ಯಾ.ವೈ ಭಾಸ್ಕರ್ ರಾವ್ ಅವರು ಸೋಮವಾರ....

Published On :
ಬೆಂಗಳೂರು: ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ನಿವೃತ್ತ ನ್ಯಾ.ವೈ ಭಾಸ್ಕರ್ ರಾವ್ ಅವರು ಸೋಮವಾರ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದುಕೊಂಡಿದ್ದಾರೆ.
ಮಗನ ಭ್ರಷ್ಟಾಚಾರಕ್ಕೆ ಸಹಕರಿಸಿದ ಆರೋಪದ ಮೇಲೆ ವಿಶೇಷ ತನಿಖಾ ತಂಡ(ಎಸ್ ಐಟಿ) ನ್ಯಾ.ಭಾಸ್ಕರ್ ರಾವ್ ಅವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದು, ಆದರೆ ಇದನ್ನು ರದ್ದುಪಡಿಸುವಂತೆ ಕೋರಿ ಭಾಸ್ಕರ್ ರಾವ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್, ನ್ಯಾಯಾಧೀಶರ ಮುಂದೆ ಹಾಜರಾಗುವಂತೆ ಸೂಚಿಸಿತ್ತು.
ಪುತ್ರ ಅಶ್ವಿನ್ ರಾವ್ ಭ್ರಷ್ಟಾಚಾರಕ್ಕೆ ಸಹಕರಿಸಿದ ಆರೋಪ ಎದುರಿಸುತ್ತಿರುವ ಭಾಸ್ಕರ ರಾವ್ ಇದೇ ಮೊದಲ ಬಾರಿಗೆ ಮೆಯೋ ಹಾಲ್ ಬಳಿ ಇರುವ ವಿಶೇಷ ಕೋರ್ಟ್ ಗೆ ಹಾಜರಾಗಿ, ವಿಚಾರಣೆ ಎದುರಿಸಿದರು.
ಇದೇ ವೇಳೆ ಮಧ್ಯಂತರ ಜಾಮೀನು ಕೋರಿ ಆರೋಪಿ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಿದ ಕೋರ್ಟ್, ಒಂದು ಲಕ್ಷ ರುಪಾಯಿ ಬಾಂಡ್, ಹಾಗೂ ಒಬ್ಬರ ಶ್ಯೂರಿಟಿ ಮೇಲೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Lokayukta graft caseನ್ಯಾ.ಭಾಸ್ಕರ್ ರಾವ್ಲೋಕಾ ಭ್ರಷ್ಟಾಚಾರJustice Bhaskar Raoproduced before courtನ್ಯಾಯಾಲಯಕ್ಕೆ ಹಾಜರು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


