ಕೋಲ್ಕತ್ತಾದಲ್ಲಿ ಎಟಿಎಂ ಲೂಟಿ ಮಾಡಲು ಪ್ರಯತ್ನಿಸಿದ ಇಬ್ಬರ ಬಂಧನ
ಕೋಲ್ಕತ್ತಾದಲ್ಲಿ ಎಟಿಎಂ ಒಂದನ್ನು ಲೂಟಿ ಮಾಡಲು ಪ್ರಯತ್ನಿಸಿದ ಇಬ್ಬರನ್ನು ಮಂಗಳವಾರ ಬೆಳಗ್ಗೆ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Published On :
ಕೋಲ್ಕತ್ತಾ: ಕೋಲ್ಕತ್ತಾದಲ್ಲಿ ಎಟಿಎಂ ಒಂದನ್ನು ಲೂಟಿ ಮಾಡಲು ಪ್ರಯತ್ನಿಸಿದ ಇಬ್ಬರನ್ನು ಮಂಗಳವಾರ ಬೆಳಗ್ಗೆ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ದಕ್ಷಿಣ ಕೋಲ್ಕತ್ತಾದ ಬೇಹಾಲಾದಲ್ಲಿನ ಸೆಂಟ್ರಲ್ ಬ್ಯಾಂಕ್ ಎಟಿಎಂ ಒಂದನ್ನು ದರೋಡೆ ಮಾಡಲು ಪಪ್ಪು ಹಾಲ್ದೆರ್ ಮತ್ತು ಶಿಭುಶಂಕರ್ ಪ್ರಯತ್ನಿಸುತ್ತಿದ್ದರು ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.
"ನಗದು ನೀಡುವ ಯಂತ್ರವನ್ನು ಕಳಚಿ ಧ್ವಂಸ ಮಾಡುವ ಆಯುಧಗಳನ್ನು ಅವರಿಂದ ವಶಪಡಿಸಿಕೊಳ್ಳಲಾಗಿದೆ" ಎಂದು ಕೂಡ ಅವರು ಹೇಳಿದ್ದಾರೆ.
ಎಟಿಎಂ ದರೋಡೆಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಪೊಲೀಸರು ಕಣ್ಗಾವಲನ್ನು ಹೆಚ್ಚಿಸಿದ್ದಾರೆ ಎಂದು ಕೂಡ ಅಧಿಕಾರಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


