ಪ್ರಧಾನ ಸುದ್ದಿ

ರಾಜ್ಯದ ರೈತರ ಬೆಳೆಗೆ ನೀರು: ವಿಧಾಸಭೆಯಲ್ಲಿ ನಿರ್ಣಯ ಮಂಡನೆ

ಕಳೆದ ಬಾರಿ ವಿಶೇಷ ಅಧಿವೇಶ ಕರೆದು ಕಾವೇರಿ ನೀರು ಕುಡಿಯಲು ಮಾತ್ರ ಎಂದು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದ್ದ ರಾಜ್ಯ...

ರಾಜ್ಯದ ರೈತರ ಬೆಳೆಗೆ ನೀರು: ವಿಧಾಸಭೆಯಲ್ಲಿ ನಿರ್ಣಯ ಮಂಡನೆ
ಮುಖ್ಯಮಂತ್ರಿ ಸಿದ್ದರಾಮಯ್ಯ
Published On :
ಬೆಂಗಳೂರು: ಕಳೆದ ಬಾರಿ ವಿಶೇಷ ಅಧಿವೇಶ ಕರೆದು ಕಾವೇರಿ ನೀರು ಕುಡಿಯಲು ಮಾತ್ರ ಎಂದು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದ್ದ ರಾಜ್ಯ ಸರ್ಕಾರ ಸೋಮವಾರ ರಾಜ್ಯದ ಬೆಳೆಗೆ ಕಾವೇರಿ ನೀರು ಬಿಡುವ ಕುರಿತು ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದೆ.
ರಾಜ್ಯದ ರೈತರ ಬೆಳೆಗಳಿಗೆ ನೀರು ಹರಿಸಲು ಸರ್ಕಾರ ತೀರ್ಮಾನಿಸಿದ್ದು, ಈ ಸಂಬಂಧ ಇಂದು ವಿಧಾನಸಭೆಯಲ್ಲಿ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು ನಿರ್ಣಯ ಮಂಡಿಸಿದ್ದಾರೆ.
ನಿರ್ಣಯದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನ್ಯಾಯಾಲಯದ ಮೇಲೆ ನಮಗೆ ಅಪಾರವಾದ ಗೌರವವಿದೆ. ಆದರೆ ಕುಡಿಯುವ ನೀರಿನ ಹಕ್ಕು ಮೂಲಭೂತ ಹಕ್ಕಾಗಿದೆ. ಹೀಗಾಗಿ ಕುಡಿಯುವ ನೀರಿ ಮೊದಲ ಆದ್ಯತೆ ಕುಡಿಯುವ ನೀರಿಗೆ ಎಂದರು.
ವಿಧಾನಪರಿಷತ್ತಿನಲ್ಲೂ ಈ ಕುರಿತು ನಿರ್ಣಯ ಮಂಡನೆಯಾಗಿದ್ದು, ಸೆ.23ರಂದು ತೆಗೆದುಕೊಂಡಿದ್ದ ನಿರ್ಣಯದಲ್ಲಿ ಬದಲಾವಣೆಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.