ನಮ್ಮ ಆದೇಶ ನಿರಾಕರಿಸುವುದನ್ನು ನಿಲ್ಲಿಸಿ: ಕರ್ನಾಟಕಕ್ಕೆ ಸುಪ್ರೀಂ ಸೂಚನೆ
ಕಾವೇರಿ ವಿಚಾರವಾಗಿ ನಾವು ನೀಡುತ್ತಿರುವ ಆದೇಶಗಳನ್ನು ನಿರಾಕರಿಸುವುದನ್ನು ನಿಲ್ಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.

ನವದೆಹಲಿ: ಕಾವೇರಿ ವಿಚಾರವಾಗಿ ನಾವು ನೀಡುತ್ತಿರುವ ಆದೇಶಗಳನ್ನು ನಿರಾಕರಿಸುವುದನ್ನು ನಿಲ್ಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ಸೂಚಿಸಿದೆ.
ಕಾವೇರಿ ವಿಚಾರ ಸಂಬಂಧ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಸತತ ಆದೇಶದ ಹೊರತಾಗಿಯೂ ನ್ಯಾಯಾಲಯದ ಆದೇಶವನ್ನು ನಿರಾಕರಿಸುತ್ತಿರುವ ಕರ್ನಾಟಕದ ನಡೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಅಲ್ಲದೆ ತಮಿಳುನಾಡಿಗೆ ನೀರು ಬಿಡುವ ಕುರಿತು ಸೂಕ್ತ ತೀರ್ಮಾನ ಕೈಗೊಂಡು ನಾಳೆ ಮಧ್ಯಾಹ್ನ 2 ಗಂಟೆಯೊಳಗೆ ನ್ಯಾಯಾಲಯಕ್ಕೆ ತಿಳಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಇದೇ ವೇಳೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಅಸಾಧ್ಯವೆಂದು ಹೇಳಿರುವ ಕೇಂದ್ರ ಸರ್ಕಾರದ ಅರ್ಜಿ ಕೂಡ ಇಂದೇ ವಿಚಾರಣೆಗೆ ಬರುವ ಸಾಧ್ಯತೆ ಇದ್ದು, ಕಳೆದ ಸೆ.30ರಂದು ನಿರ್ವಹಣಾ ಮಂಡಳಿ ರಚಿಸುವುದಾಗಿ ಹೇಳಿದ್ದ ಅಟಾರ್ನಿ ಜನರಲ್ ಮುಕಲ್ ರೋಹ್ಟಗಿ ಅವರು ಇಂದು ಕೇಂದ್ರ ಸರ್ಕಾರದ ಪರವಾಗಿ ಅಫಿಡವಿಟ್ ಸಲ್ಲಿಸಿದ್ದು, ಸುಪ್ರೀಂ ಆದೇಶದಂತೆ ನಿರ್ವಹಣಾ ಮಂಡಳಿ ರಚನೆ ಸಾಧ್ಯವಿಲ್ಲ. ನಿರ್ವಹಣಾ ಮಂಡಳಿ ರಚನೆ ಜವಾಬ್ದಾರಿ ಸಂಸತ್ತಿನ ಕರ್ತವ್ಯವಾಗಿದ್ದು, ಉಭಯ ಸದನಗಳ ಅನುಮೋದನೆ ಪಡೆದು ನಿರ್ವಹಣಾ ಮಂಡಳಿ ರಚಿಸಬೇಕಿದೆ ಎಂದು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


