ಪ್ರಧಾನ ಸುದ್ದಿ

ಕಾವೇರಿ ಕಿಚ್ಚು: ರೈತರ ಮೇಲಿನ 22 ಕೇಸ್ ವಾಪಸ್, 110 ತಾಲೂಕು ಬರಪೀಡಿತವೆಂದು ಘೋಷಣೆ

ತಮಿಳುನಾಡಿಗೆ ಕಾವೇರಿ ನೀರು ಬಿಡಬಾರದು ಎಂದು ಒತ್ತಾಯಿಸಿ ಹಿಂಸಾತ್ಮಕ ಪ್ರತಿಭಟನೆ ನಡೆಸಿದ ರೈತರ ವಿರುದ್ಧ ದಾಖಲಿಸಲಾಗಿದ್ದ...

ಕಾವೇರಿ ಕಿಚ್ಚು: ರೈತರ ಮೇಲಿನ 22 ಕೇಸ್ ವಾಪಸ್, 110 ತಾಲೂಕು ಬರಪೀಡಿತವೆಂದು ಘೋಷಣೆ
ಟಿ.ಬಿ.ಜಯಚಂದ್ರ
Published On :
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡಬಾರದು ಎಂದು ಒತ್ತಾಯಿಸಿ ಹಿಂಸಾತ್ಮಕ ಪ್ರತಿಭಟನೆ ನಡೆಸಿದ ರೈತರ ವಿರುದ್ಧ ದಾಖಲಿಸಲಾಗಿದ್ದ 22 ಪ್ರಕರಣಗಳನ್ನು ಹಿಂಪಡೆಯಲು ರಾಜ್ಯ ಸಚಿವ ಸಂಪುಟ ಬುಧವಾರ ಒಪ್ಪಿಗೆ ನೀಡಿದೆ.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕಾನೂನು ಸಚಿವ ಟಿಬಿ ಜಯಚಂದ್ರ ಅವರು, 2012 ಮತ್ತು 2013ರಲ್ಲಿ ಮಂಡ್ಯದಲ್ಲಿ ಕಾವೇರಿ ಪ್ರತಿಭಟನೆ ವೇಳೆ ರೈತರ ವಿರುದ್ಧ ದಾಖಲಿಸಲಾಗಿದ್ದ 22 ಪ್ರಕರಣಗಳನ್ನು ವಾಪಸ್ ಪಡೆಯಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದರು.
ಇದೇ ವೇಳೆ ತೀವ್ರ ಮಳೆ ಅಭಾವದ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯದ 22 ಜಿಲ್ಲೆಗಳ 68 ತಾಲೂಕುಗಳು ಬರಪೀಡಿತ ಎಂದು ಘೋಷಿಸಲಾಗಿದ್ದು, ಇದೀಗ ಮತ್ತೆ 42 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ತೀರ್ಮಾನಿಸಿದ್ದು, ರಾಜ್ಯದ ಒಟ್ಟು 110 ತಾಲೂಕು ಬರಪೀಡಿತವಾದಂತಾಗಿದೆ ಎಂದು ಜಯಚಂದ್ರ ಹೇಳಿದರು.
ಅತಿವೃಷ್ಠಿ ಮತ್ತು ಬರಪೀಡಿತ ಪ್ರದೇಶಗಳ ಆಧಾರದ ಮೇಲೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ 42 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳ ಸಾಲಿಗೆ ಸೇರ್ಪಡೆಗೊಳಿಸಲಾಗಿದೆ. ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಅಲ್ಲದೇ 2782 ಎಕರೆ ಅರಣ್ಯ ಭೂಮಿ ಡಿನೋಟಿಫಿಕೇಶನ್ ಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಸಚಿವರು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.