ಅಮಿತ್ ಶಾ, ಅರುಣ್ ಜೇಟ್ಲಿಯಿಂದ ನಾಳೆ ಜಯಾ ಭೇಟಿ
ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಬುಧವಾರ ಅಪೋಲೊ ಆಸ್ಪತ್ರೆಗೆ ಭೇಟಿ ನೀಡಿ,...

Published On :
ಚೆನ್ನೈ: ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಬುಧವಾರ ಅಪೋಲೊ ಆಸ್ಪತ್ರೆಗೆ ಭೇಟಿ ನೀಡಿ, ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಆರೋಗ್ಯ ವಿಚಾರಿಸಲಿದ್ದಾರೆ.
ಬಿಜೆಪಿ ಮೂಲಗಳ ಪ್ರಕಾರ, ಈ ಇಬ್ಬರು ನಾಯಕರು ನಾಳೆ ಮಧ್ಯಾಹ್ನ 3.30ರ ಸುಮಾರಿಗೆ ಚೆನ್ನೈಗೆ ಆಗಮಿಸಲಿದ್ದು, 5 ಗಂಟೆಯ ಸುಮಾರಿಗೆ ಅಪೋಲೊ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ಬಳಿಕ ಸಂಜೆಯೇ ದೆಹಲಿಗೆ ತೆರಳಲಿದ್ದಾರೆ ಎನ್ನಲಾಗಿದೆ.
ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರು ಇಂದು ಜಯಲಲಿತಾ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ಅಲ್ಲದೆ ಜಯಾ ಶೀಘ್ರ ಗುಣಮುಖರಾಗಲು ತಿರುಪತಿ ತಿಮ್ಮಪ್ಪನ ಪ್ರಸಾದ ನೀಡುವಂತೆ ಟಿಟಿಡಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.
ಇನ್ನು ಜಮ್ಮು ಮತ್ತು ಕಾಶ್ಮೀರ ಆಹಾರ ಸಚಿವ ಚೌಧರಿ ಜುಲ್ಫಿಕರ್ ಅಲಿ ಸಹ ಇಂದು ಆಸ್ಪತ್ರೆಗೆ ಭೇಟಿ ನೀಡಿ, ತಮಿಳುನಾಡು ಮುಖ್ಯಮಂತ್ರಿಯ ಆರೋಗ್ಯ ವಿಚಾರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


