ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಸಿಎಂ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಮಂಗಳವಾರ ಚಾಲನೆ ಸಿಕ್ಕಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಕರ..

Published On :
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಮಂಗಳವಾರ ಚಾಲನೆ ಸಿಕ್ಕಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಕರ ಲಗ್ನದಲ್ಲಿ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ ನಾಡಿನ ಜನತೆಗೆ ದಸರಾ ಹಬ್ಬದ ಶುಭಾಶಯ ಕೋರಿದರು.
ಜಂಬೂ ಸವಾರಿಗೆ ಮಳೆರಾಯ ಅಡ್ಡಿಪಡಿಸಿದರೂ ಅದನ್ನು ಲೆಕ್ಕಿಸದೇ ಲಕ್ಷಾಂತರ ಮಂದಿ ಜಂಬೂಸವಾರಿ ನೋಡಲಿಕ್ಕಾಗಿ ಕಾದು ನಿಂತಿದ್ದಾರೆ. ಅರಮನೆಯಲ್ಲಿ ಸಡಗರ ಮನೆ ಮಾಡಿದೆ. ನವ ವಧುವನಿಂತೆ ಸಿಂಗಾರಗೊಂಡಿರುವ ಸಾಂಸ್ಕೃತಿಕ ನಗರಿ ಮೈಸೂರು ಎಲ್ಲರ ಕಣ್ಮನ ಸೆಳೆಯುತ್ತಿದೆ.
ಕಳೆದ ನಾಲ್ಕು ವರ್ಷಗಳಿಂದ ಜಂಬೂ ಸವಾರಿ ಮೆರವಣಿಗೆಯಲ್ಲಿ ಚಿನ್ನದ ಅಂಬಾರಿ ಹೊತ್ತು ಯಶ್ವಸಿ ನಾಯಕನಾಗಿರುವ ಗಜಪಡೆ ಕ್ಯಾಪ್ಟನ್ ಅರ್ಜುನ ಇಂದು 5 ನೇ ಬಾರಿಗೆ ಅಂಬಾರಿ ಹೊತ್ತು ರಾಜ ಗಾಂಭೀರ್ಯದಿಂದ ನಡೆಯುತ್ತಿದ್ದಾನೆ. ದಸರಾ ಆರಂಭದಿಂದ 9 ದಿನಗಳು ನಡೆದ ತಾಲೀಮಿನಲ್ಲಿ ಅರ್ಜುನ ಯಶಸ್ವಿಯಾಗಿದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


