ಜಯಲಲಿತಾಗೆ ಅನಾರೋಗ್ಯ: ನೂತನ ಸಿಎಂ ನೇಮಕಕ್ಕೆ ಡಿಎಂಕೆ ಆಗ್ರಹ
ಅನಾರೋಗ್ಯದ ಕಾರಣದಿಂದ ಚೆನ್ನೈನ ಅಪೋಲೋ ಆಸ್ಪತ್ರೆಗೆ ತಮಿಳುನಾಡು ಸಿಎಂ ಜಯಲಲಿತಾ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ರಾಜ್ಯಕ್ಕೆ ನೂತನ...

ಚೆನ್ನೈ: ಅನಾರೋಗ್ಯದ ಕಾರಣದಿಂದ ಚೆನ್ನೈನ ಅಪೋಲೋ ಆಸ್ಪತ್ರೆಗೆ ತಮಿಳುನಾಡು ಸಿಎಂ ಜಯಲಲಿತಾ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ರಾಜ್ಯಕ್ಕೆ ನೂತನ ಮುಖ್ಯಮಂತ್ರಿ ನೇಮಿಸಬೇಕು ಎಂದು ಪ್ರತಿಪಕ್ಷ ಡಿಎಂಕೆ ಆಗ್ರಹಿಸಿದೆ.
ಈ ಮೊದಲು ಕಲವೇ ದಿನಗಳಲ್ಲಿ ಜಯಲಲಿತಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಅಪೋಲೊ ಆಸ್ಪತ್ರೆ ತಿಳಿಸಿತ್ತು, ಆದರೆ ಈಗ ಮತ್ತಷ್ಟು ದಿನ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯಬೇಕೆಂದು ಹೇಳುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಆಡಳಿತ ಯಂತ್ರ ಸುಗಮವಾಗಿ ನಡೆಯಲು ನೂತನ ಮುಖ್ಯಮಂತ್ರಿ ನೇಮಿಸಬೇಕು ಇಲ್ಲವೇ, ಉಸ್ತುವಾರಿ ಸಿಎಂ ನೇಮಸಬೇಕು ಎಂದು ತಮಿಳುನಾಡು ವಿರೋಧ ಪಕ್ಷದ ನಾಯಕ ಎಂ.ಕೆ ಸ್ಟಾಲಿನ್ ಒತ್ತಾಯಿಸಿದ್ದಾರೆ. ಆದರೆ ಈ ಬೇಡಿಕೆಗೆ ಮತ್ತೊಂದು ವಿರೋಧ ಪಕ್ಷವಾದ ಕಾಂಗ್ರೆಸ್ ಬೆಂಬಲ ಸೂಚಿಸಿಲ್ಲ.
ಕಾವೇರಿ ವಿವಾದ ಸೇರಿದಂತೆ ತಮಿಳುನಾಡು ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಆಡಳಿತ ಯಂತ್ರ ಚುರುಕಾಗಿ ನಡೆಯಬೇಕೆಂದರೇ ತಕ್ಷಣವೇ ಉಸ್ತುವಾರಿ ಮುಖ್ಯಮಂತ್ರಿಯನ್ನಾದರೂ ನೇಮಿಸಬೇಕು ಎಂದು ಒತ್ತಾಯಿಸಿದ್ದಾರೆ.
ಆದರೆ ಇದಕ್ಕೆ ಪ್ರತಿಕ್ರಿಯಿಸಿರುವ ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ತಿರುವನುಕ್ಕರಸರ್ ಸಿಎಂ ಜಯಲಲಿತಾ ಅವರ ಆರೋಗ್ಯದಲ್ಲಿ ಚೇತರಿಕೆ ಕಡು ಬರುತ್ತಿದೆ. ಸರ್ಕಾರದ ಆಡಳಿತ ಯಂತ್ರದ ಮೇಲೆ ನಿಗಾ ಇಡಲು ರಾಜ್ಯಪಾಲರಿದ್ದಾರೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಇದ್ದಾರೆ, ಗೃಹಕಾರ್ಯದರ್ಶಿ, ಸೇರಿದಂತೆ ಹಲವು ಇಲಾಖೆ ಗಳ ಕಾರ್ಯದರ್ಶಿಗಳು ಹಾಗೂ ಹಿರಿಯ ಸಚಿವರಿದ್ದಾರೆ. ಆಡಳಿತ ಯಂತ್ರ ಯಥವತ್ತಾಗಿ ತನ್ನ ಕಾರ್ಯ ನಿರ್ವಹಿಸುತ್ತಿದೆ. ಹೀಗಾಗಿ ನೂತನ ಮುಖ್ಯಮಂತ್ರಿ ನೇಮಿಸುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


