ಜಯಲಲಿತಾ ಆರೋಗ್ಯದ ಬಗ್ಗೆ ವದಂತಿ ಹಬ್ಬಿಸಿದ ಮತ್ತಿಬ್ಬರ ಬಂಧನ
ತಮಿಳು ನಾಡು ಮುಖ್ಯಮಂತ್ರಿ ಜೆ ಜಯಲಲಿತಾ ಅವರ ಆರೋಗ್ಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವದಂತಿ ಹಬ್ಬಿಸಿದ ಆರೋಪದ ಮೇಲೆ ಪೊಲೀಸರು ಮಂಗಳವಾರ ಮತ್ತೆ ಇಬ್ಬರನ್ನು

Published On :
ಚೆನ್ನೈ: ತಮಿಳು ನಾಡು ಮುಖ್ಯಮಂತ್ರಿ ಜೆ ಜಯಲಲಿತಾ ಅವರ ಆರೋಗ್ಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವದಂತಿ ಹಬ್ಬಿಸಿದ ಆರೋಪದ ಮೇಲೆ ಪೊಲೀಸರು ಮಂಗಳವಾರ ಮತ್ತೆ ಇಬ್ಬರನ್ನು ಬಂಧಿಸಿದ್ದಾರೆ.
ಎಐಡಿಎಂಕೆ ಪಕ್ಷದ ಮಾಹಿತಿ ತಂತ್ರಜ್ಞಾನ ಕಾರ್ಯದರ್ಶಿ ನೀಡಿದ ದೂರಿನ ಮೇಲೆ, ಸಾರ್ವಜನಿಕರಲ್ಲಿ ಸುಳ್ಳು ಮಾಹಿತಿ ನೀಡಿ ಭೀತಿ ಹಬ್ಬಿಸುತ್ತಿದ್ದಾರೆ ಎಂದು ಸತೀಶ್ ಕುಮಾರ್ ಮತ್ತು ಮಾದಸ್ವಾಮಿ ಎಂಬುವವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ಜಯಲಲಿತಾ ಆರೋಗ್ಯದ ಬಗ್ಗೆ ಸುಳ್ಳು ವದಂತಿ ಹರಡಿದ್ದಾರೆ ಎಂಬ ದೂರಿನ ಮೇರೆಗೆ ಪೊಲೀಸರು ಇಲ್ಲಿಯವರೆಗೆ 43 ಪ್ರಕರಣಗಳನ್ನು ದಾಖಲಿಸಿದ್ದಾರೆ.
ಜ್ವರ ಮತ್ತು ದೇಹದಲ್ಲಿ ನೀರಿನ ಅಂಶದ ಕೊರತೆಯಿಂದಾಗಿ 68 ವರ್ಷದ ಮುಖ್ಯಮಂತ್ರಿಯವರನ್ನು ಸೆಪ್ಟೆಂಬರ್ 22 ರಂದು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಇನ್ನು ಆಸ್ಪತ್ರೆಯಲ್ಲಿಯೇ ಉಳಿದಿದ್ದು, ಚೇತರಿಸಿಕೊಳುತ್ತಿರುವುದಾಗಿ ಅಪೋಲೋ ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


