ಪ್ರಧಾನ ಸುದ್ದಿ

ಮಹದಾಯಿ ವಿವಾದ: ರಾಜ್ಯ ಬಿಜೆಪಿ ನಾಯಕರಿಂದ ಮಹಾ ಸಿಎಂ ಭೇಟಿ

ಮಹದಾಯಿ ನದಿ ನೀರಿನ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಅ.21ರಂದು ಮೂರು ರಾಜ್ಯಗಳ...

ಮಹದಾಯಿ ವಿವಾದ: ರಾಜ್ಯ ಬಿಜೆಪಿ ನಾಯಕರಿಂದ ಮಹಾ ಸಿಎಂ ಭೇಟಿ
ದೇವೇಂದ್ರ ಫಡ್ನವಿಸ್ ಜೊತೆ ಬಿಜೆಪಿ ನಾಯಕರು
Published On :
ಮುಂಬೈ: ಮಹದಾಯಿ ನದಿ ನೀರಿನ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಅ.21ರಂದು ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ರಾಜ್ಯ ಬಿಜೆಪಿ ನಾಯಕರು ಬುಧವಾರ ಭೇಟಿ ಮಾಡಿ ಮಾತುಕತೆ ನಡೆಸಿದರು.
ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಕೇಂದ್ರ ಸಚಿವ ಅನಂತ್ ಕುಮಾರ್ ಹಾಗೂ ಸಂಸದ ಪ್ರಹ್ಲಾದ್ ಜೋಶಿ ನೇತೃತ್ವದ ಬಿಜೆಪಿ ತಂಡ ಇಂದು ಮುಂಬೈನಲ್ಲಿರುವ ಸಚಿವಾಲಯದಲ್ಲಿ ಫಡ್ನವಿಸ್ ಅವರನ್ನು ಭೇಟಿಯಾಗಿ ಸುಮಾರು ಒಂದು ಗಂಟೆಗಳ ಕಾಲ ಮಹಾದಾಯಿ ವಿವಾದ ಕುರಿತು ಚರ್ಚೆ ನಡೆಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.
ಮಹದಾಯಿ ನದಿ ನೀರನ್ನು ಕುಡಿಯಲು ಮಾತ್ರ ಬಳಸುತ್ತೇವೆ. ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಿದೆ ಎಂದು ಬಿಜೆಪಿ ಮುಖಂಡರು ಫಡ್ನವಿಸ್ ಗೆ ಮನವರಿಕೆ ಮಾಡಿಕೊಟ್ಟಿರುವುದಾಗಿ ವರದಿ ವಿವರಿಸಿದೆ.
ಮಹದಾಯಿ ಯೋಜನೆಗೆ ಅಡ್ಡಿಪಡಿಸದಂತೆ ಫಡ್ನವೀಸ್ ಗೆ ಮನವಿ ಸಲ್ಲಿಸಲಾಗಿದೆ. ಮಹದಾಯಿ ನ್ಯಾಯಾಧಿಕರಣದ ಆದೇಶದಂತೆ ಮಾತುಕತೆ ಮೂಲಕವೇ ಈ ವಿವಾದವನ್ನು ಬಗೆಹರಿಸಿಕೊಳ್ಳುವುದು ಉತ್ತಮ ಎಂದು ಸಲಹೆ ನೀಡಿರುವುದಾಗಿ ಬಿಜೆಪಿ ಮುಖಂಡರು ತಿಳಿಸಿದ್ದಾರೆ.
ಮಹದಾಯಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 21ರಂದು ಗೋವಾ, ಕರ್ನಾಟಕ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿಗಳ ಸಭೆ ನಿಗದಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಗೋವಾ ಮುಖ್ಯಮಂತ್ರಿ ಲಕ್ಷ್ಮಿಕಾಂತ್ ಪರ್ಸೆಕರ್ ಅವರು ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.