ಸೆಲ್ಫಿಯಿಂದ ಮತ್ತೊಂದು ಪ್ರಾಣಕ್ಕೆ ಕುತ್ತು; ಒರಿಸ್ಸಾದಲ್ಲಿ ಟೆಕ್ಕಿ ನದಿಯಲ್ಲಿ ಮುಳುಗಿ ಮೃತ
25 ವರ್ಷದ ಸಾಫ್ಟ್ ವೇರ್ ಎಂಜಿನಿಯರ್ ಒಬ್ಬರು ಸೆಲ್ಫಿ ತೆಗೆದುಕೊಳ್ಳಲು ಹೋಗಿ ಪ್ರಾಣ ಕಳೆದುಕೊಂಡ ಘಟನೆ ಒರಿಸ್ಸಾದ ಗಜಪತಿ ಜಿಲ್ಲೆಯಲ್ಲಿ ನಡೆದಿದೆ. ಅವರು ನದಿಗೆ ಬಿದ್ದು ಮುಳುಗಿ

Published On :
ಪಾರ್ಲಖೆಮುಂಡಿ (ಒರಿಸ್ಸಾ): 25 ವರ್ಷದ ಸಾಫ್ಟ್ ವೇರ್ ಎಂಜಿನಿಯರ್ ಒಬ್ಬರು ಸೆಲ್ಫಿ ತೆಗೆದುಕೊಳ್ಳಲು ಹೋಗಿ ಪ್ರಾಣ ಕಳೆದುಕೊಂಡ ಘಟನೆ ಒರಿಸ್ಸಾದ ಗಜಪತಿ ಜಿಲ್ಲೆಯಲ್ಲಿ ನಡೆದಿದೆ. ಅವರು ನದಿಗೆ ಬಿದ್ದು ಮುಳುಗಿ ಮೃತರಾಗಿದ್ದಾರೆ.
ಮೃತಪಟ್ಟ ಟೆಕ್ಕಿ ಪಾರ್ಲಖೆಮುಂಡಿಯ ಕಾಮಾಕ್ಯ ನಗರದ ನಿವಾಸಿ ಆರ್ ಪಟ್ನಾಯಕ್ ಎಂದು ಗುರುತಿಸಲಾಗಿದೆ. ಮಹೇಂದ್ರತನಯ ನದಿಯ ಬಳಿ ಮರವೇರಿ ಸೆಲ್ಫಿ ತೆಗೆದುಕೊಳ್ಳಲು ಹೋದಾಗ, ಆಯತಪ್ಪಿ ನದಿಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪಾರ್ಲಖೆಮುಂಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಬಾಬುಲಿ ನಾಯಕ್ ಹೇಳಿದ್ದಾರೆ.
ಬೆಂಗಳೂರಿನ ಖಾಸಗಿ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪಟ್ನಾಯಕ್ ದೇಹವನ್ನು ನಂತರ ಅಗ್ನಿಶಾಮಕ ದಳ, ಆತ ಬಿದ್ದ ಸ್ಥಳದಿಂದ 100 ಮೀಟರ್ ದೂರದಲ್ಲಿ ಪತ್ತೆ ಹಚ್ಚಿದೆ ಎಂದು ಕೂಡ ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


