ಪ್ರಧಾನ ಸುದ್ದಿ

ಮಹದಾಯಿ ವಿವಾದ: ಅ.19ಕ್ಕೆ ಸರ್ವಪಕ್ಷ ಸಭೆ ಕರೆದ ಸಿಎಂ ಸಿದ್ದರಾಮಯ್ಯ

ಮಹದಾಯಿ ನದಿ ನೀರಿನ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಅ.21ರಂದು ಕರೆದಿರುವ ಮೂರು ರಾಜ್ಯಗಳ...

ಮಹದಾಯಿ ವಿವಾದ: ಅ.19ಕ್ಕೆ ಸರ್ವಪಕ್ಷ ಸಭೆ ಕರೆದ ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ
Published On :
ಬೆಂಗಳೂರು: ಮಹದಾಯಿ ನದಿ ನೀರಿನ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಅ.21ರಂದು ಕರೆದಿರುವ ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅ.19ಕ್ಕೆ ಸರ್ವಪಕ್ಷ ಸಭೆ ಕರೆದಿದ್ದಾರೆ.
ಮುಂಬೈನಲ್ಲಿ ಅಕ್ಟೋಬರ್ 21ರಂದು ಕರ್ನಾಟಕ, ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಯಲಿದೆ. ಇದಕ್ಕೂ ಮುನ್ನ ಅಕ್ಟೋಬರ್ 19ರಂದು ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಸರ್ವಪಕ್ಷಗಳ ಸಭೆ ಕರೆಯಲಾಗಿದೆ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು ತಿಳಿಸಿದ್ದಾರೆ.
ಮಹದಾಯಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫ‌ಡ್ನವಿಸ್‌ ಅವರು ಅಕ್ಟೋಬರ್ 21ರಂದು ಕರ್ನಾಟಕ, ಗೋವಾ ಮುಖ್ಯಮಂತ್ರಿಗಳ ಸಭೆ ಕರೆದಿದ್ದಾರೆ. ಮುಂಬೈನಲ್ಲಿ ಸಭೆ ನಿಗದಿಯಾಗಿದೆ. ಹೀಗಾಗಿ, ಅಂದಿನ ಸಭೆಯಲ್ಲಿ ರಾಜ್ಯದ ನಿಲುವು ಯಾವ ರೀತಿ ಇರಬೇಕು ಎಂಬುದರ ಬಗ್ಗೆ ಚರ್ಚಿಸಲು ಬೆಂಗಳೂರಿನಲ್ಲಿ ಸರ್ವಪಕ್ಷಗಳ ಸಭೆ ಕರೆಯಲಾಗಿದೆ.
ನಿನ್ನೆಯಷ್ಟೇ ರಾಜ್ಯ ಬಿಜೆಪಿ ಮುಖಂಡರು ಈ ಸಂಬಂಧ ಮಹಾ ಸಿಎಂ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.