ಪ್ರಧಾನ ಸುದ್ದಿ

ಉಗ್ರ ಮಸೂದ್ ಅಜರ್ ಬೆಂಬಲಕ್ಕೆ ನಿಂತ ಚೀನಾಗೆ ಭಾರತ ಟಾಂಗ್; ಎನ್ ಐಎ ಯಿಂದ ಚಾರ್ಜ್ ಶೀಟ್ ದಾಖಲು

ಜೈಶ್ ಇ ಮೊಹಮದ್ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ನನ್ನು ವಿಶ್ವಸಂಸ್ಥೆಯ ಭಯೋತ್ಪಾದಕ ಪಟ್ಟಿಗೆ ಸೇರಿಸಬೇಕು ಎನ್ನುವ ನಿಲುವಿಗೆ ಅಡ್ಡಿಯಾಗಿರುವ ಚೀನಾಗೆ ಟಾಂಗ್ ನೀಡಿರುವ ಭಾರತ ಪಠಾಣ್ ಕೋಟ್ ಉಗ್ರ ದಾಳಿ ಪ್ರಕರಣ ಸಂಬಂಧ ಚಾರ್ಜ್ ಶೀಟ್ ದಾಖಲು ಮಾಡಿದೆ.

ಉಗ್ರ ಮಸೂದ್ ಅಜರ್ ಬೆಂಬಲಕ್ಕೆ ನಿಂತ ಚೀನಾಗೆ ಭಾರತ ಟಾಂಗ್; ಎನ್ ಐಎ ಯಿಂದ ಚಾರ್ಜ್ ಶೀಟ್ ದಾಖಲು
ಉಗ್ರ ಮಸೂದ್ ಅಜರ್ (ಸಂಗ್ರಹ ಚಿತ್ರ)
Published On :

ನವದೆಹಲಿ: ಜೈಶ್ ಇ ಮೊಹಮದ್ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ನನ್ನು ವಿಶ್ವಸಂಸ್ಥೆಯ ಭಯೋತ್ಪಾದಕ ಪಟ್ಟಿಗೆ ಸೇರಿಸಬೇಕು ಎನ್ನುವ ನಿಲುವಿಗೆ ಅಡ್ಡಿಯಾಗಿರುವ ಚೀನಾಗೆ  ಟಾಂಗ್ ನೀಡಿರುವ ಭಾರತ ಪಠಾಣ್ ಕೋಟ್ ಉಗ್ರ ದಾಳಿ ಪ್ರಕರಣ ಸಂಬಂಧ ಚಾರ್ಜ್ ಶೀಟ್ ದಾಖಲು ಮಾಡಿದೆ.

ಪಠಾಣ್ ಕೋಟ್ ಸೇನಾನೆಲೆ ಮೇಲಿನ ದಾಳಿ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಶುಕ್ರವಾರ ಉಗ್ರ ಮಸೂದ್ ಅಜರ್ ಸೇರಿದಂತೆ ಆತನ  ಸಹೋದರ ಅಬ್ದುಲ್ ರಾಫ್, ಇತರೆ ಇಬ್ಬರು ಉಗ್ರರ ವಿರುದ್ಧ ಚಾರ್ಜ್ ಶೀಟ್ ದಾಖಲು ಮಾಡಿದೆ. ಇನ್ನು ಎನ್ ಐಎ ದಾಖಲಿಸಿರುವ ಚಾರ್ಜ್ ಶೀಟ್ ನಲ್ಲಿರುವ ಇತರೆ ಇಬ್ಬರು ಉಗ್ರಗಾಮಿಗಳು  ಕೂಡ ಪಾಕಿಸ್ತಾನ ಮೂಲದವರಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಪ್ರಕರಣ ಸಂಬಂಧ ಎನ್ ಐಎ ಅಧಿಕಾರಿಗಳು ಸಂಗ್ರಹಿಸಿರುವ ಪ್ರಮುಖ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಚಾರ್ಜ್ ಶೀಟ್ ದಾಖಲಿಸಲಾಗಿದ್ದು, ಇದರಲ್ಲಿ ವಿಧಿ ವಿಜ್ಞಾನ ಪ್ರಯೋಗಾಲಯದ  ವರದಿ, ದೂರವಾಣಿ ಕರೆಗಳ ಮಾಹಿತಿ, ಸ್ಥಳದಲ್ಲಿ ದೊರೆತ ವಸ್ತುಗಳ ಮೂಲ ಹಾಗೂ ಸಾವಿಗೀಡಾದ ಉಗ್ರಗಾಮಿಗಳ ಮೂಲಗಳನ್ನು ಆಧರಿಸಿ ವರದಿ ತಯಾರಿಸಲಾಗಿದೆ ಎಂದು ತಿಳಿದುಬಂದಿದೆ.

ಎನ್ ಐಎ ಅಧಿಕಾರಿಗಳ ಈ ಚಾರ್ಜ್ ಶೀಟ್ ವಿಶ್ವಸಂಸ್ಥೆಯಲ್ಲಿ ಅಜರ್ ಮಸೂದ್ ನನ್ನು ಜಾಗತಿಕ ಭಯೋತ್ಪಾದಕರ ಪಟ್ಟಿಗೆ ಸೇರಿಸುವ ಭಾರತದ ಮನವಿಗೆ ಬಲ ತಂದಂತಾಗಿದೆ. ಈ ಮೂಲಕ  ಭಾರತ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪಾಕಿಸ್ತಾನದ ಮೇಲೆ ಪರಿಣಾಮಕಾರಿ ಒತ್ತಡ ಹೇರಲು ಅನುಕೂಲವಾಗುತ್ತದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.