ಭಯೋತ್ಪಾದನೆ ಸಹಿಸುವ ಪ್ರಶ್ನೆಯೇ ಇಲ್ಲ: ಇಂಡೋ-ರಷ್ಯಾ ಜಂಟಿ ಹೇಳಿಕೆ
ವಿಶ್ವ ಸಮುದಾಯಕ್ಕೆ ಕಂಟಕವಾಗಿರುವ ಜಾಗತಿಕ ಭಯೋತ್ಪಾದನೆಯನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಜಂಟಿ ಹೇಳಿಕೆ ನೀಡಿದ್ದಾರೆ.

ಪಣಜಿ: ವಿಶ್ವ ಸಮುದಾಯಕ್ಕೆ ಕಂಟಕವಾಗಿರುವ ಜಾಗತಿಕ ಭಯೋತ್ಪಾದನೆಯನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಜಂಟಿ ಹೇಳಿಕೆ ನೀಡಿದ್ದಾರೆ.
ಗೋವಾದಲ್ಲಿ 2016ನೇ ಸಾಲಿನ ವಾರ್ಷಿಕ ಬ್ರಿಕ್ಸ್ ಶೃಂಗಸಭೆ ನಡೆಯುತ್ತಿದ್ದು, ಸಭೆಯಲ್ಲಿ ಪಾಲ್ಗೊಳ್ಳಲು ಗೋವಾಗೆ ಆಗಮಿಸಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಇಂದು ಭಾರತ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ಶಿಕ್ಷಣ, ರೈಲ್ವೇ, ರಕ್ಷಣೆ ಸೇರಿದಂತೆ 16 ಮಹತ್ವದ ಒಪ್ಪಂದಗಳಿಗೆ ಉಭಯ ನಾಯಕರು ಸಹಿ ಹಾಕಿದರು. ಬಳಿಕ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಈ ವೇಳೆ ರಷ್ಯಾ ಅಧ್ಯಕ್ಷರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಇಬ್ಬರು ಹೊಸ ಸ್ನೇಹಿತರಿಗಿಂತ ಓರ್ವ ಹಳೆಯ ಸ್ನೇಹಿತ ಉತ್ತಮ. ಪುಟಿನ್ ಅವರ ಭೇಟಿ ಭಾರತ ಮತ್ತು ರಷ್ಯಾ ನಡುವಿನ ದೃಢ ಬಾಂಧವ್ಯಕ್ಕೆ ಸಾಕ್ಷಿಯಾಗಿದೆ. ಗಡಿಯಾಚೆಗಿನ ಭಯೋತ್ಪಾದನೆ ಕುರಿತಂತೆ ಮಾಸ್ಕೋ ನಿರ್ಧಾರಗಳು ನಿಜಕ್ಕೂ ಶ್ಲಾಘನೀಯವಾಗಿದ್ದು, ನಮ್ಮ ಬೆಂಬಲ ಸದಾಕಾಲವಿರುತ್ತದೆ ಎಂದು ಹೇಳಿದರು.
ಬಳಿಕ ಮಾತನಾಡಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು, ಭಾರತ ಮತ್ತು ರಷ್ಯಾ ಎರಡೂ ದೇಶಗಳ ಬಾಂಧವ್ಯ ಹಿಂದೆಂದಿಗಿಂತಲೂ ಉತ್ತಮವಾಗಿದೆ. ಕೈಗಾರಿಕೆ, ರಕ್ಷಣೆ, ಮಿಲಿಟರಿ ತಾಂತ್ರಿಕತೆಯಲ್ಲಿ ಉಭಯ ದೇಶಗಳ ಸಹಕಾರ ಸುಧಾರಿಸುತ್ತಿದೆ ಎಂದು ಹೇಳಿದರು.
ಇದಕ್ಕೂ ಮೊದಲು ನಡೆದ ಸಭೆಯಲ್ಲಿ ಉಭಯ ನಾಯಕರು ಉನ್ನತಮಟ್ಟದ ಗೌಪ್ಯ ಚರ್ಚೆ ನಡೆಸಿದರು. ಸುಮಾರು ಅರ್ಧಗಂಟೆಗೂ ಅಧಿಕ ಕಾಲ ನಡೆದ ಈ ಗೌಪ್ಯ ಸಭೆಯಲ್ಲಿ ಉಭಯ ನಾಯಕರು ಜಾಗತಿಕ ಭಯೋತ್ಪಾದನೆ, ಇಂಡೋ-ರಷ್ಯಾ ದ್ವಿಪಕ್ಷೀಯ ಸಂಬಂಧ ಹಾಗೂ ರಕ್ಷಣಾ ಒಪ್ಪಂದಗಳ ಕುರಿತು ಚರ್ಚೆ ನಡೆಸಿದರು. ಮೂಲಗಳ ಪ್ರಕಾರ ಚರ್ಚೆಯಲ್ಲಿ ಪಾಕ್ ಪ್ರಾಯೋಜಿತ ಭಯೋತ್ಪಾದನೆಯ ಚರ್ಚೆಯ ಪ್ರಮುಖ ವಿಷಯವಾಗಿದ್ದು, ಭಾರತದಲ್ಲಿ ಇತ್ತೀಚೆಗೆ ನಡೆದ ವಿವಿಧ ಉಗ್ರ ದಾಳಿಗಳ ಕುರಿತಂತೆ ಭಾರತ ರಷ್ಯಾದೊಂದಿಗೆ ಚರ್ಚೆ ನಡೆಸಿದೆ. ಅಲ್ಲದೆ ಈ ಎಲ್ಲ ದಾಳಿಗಳ ಹಿಂದೆಯೂ ಪಾಕಿಸ್ತಾನದ ಕೈವಾಡವಿದೆ ಎಂದು ಭಾರತ ವಾದಿಸಿದ್ದು, ಈ ಸಂಬಂಧ ಸಾಕ್ಷ್ಯಾಧಾರಗಳನ್ನು ಕೂಡ ಪ್ರದರ್ಶಿಸಿದೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


