ಪ್ರಧಾನ ಸುದ್ದಿ

ಅಪೋಲೊ ಆಸ್ಪತ್ರೆಗೆ ಭೇಟಿ ನೀಡಿ ಜಯಾ ಆರೋಗ್ಯ ವಿಚಾರಿಸಿದ ರಜನಿಕಾಂತ್

ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರು ಭಾನುವಾರ ಚೆನ್ನೈನ ಅಪೋಲೊ ಆಸ್ಪತ್ರೆಗೆ ಭೇಟಿ ನೀಡಿ ತಮಿಳುನಾಡು ಮುಖ್ಯಮಂತ್ರಿ...

ಅಪೋಲೊ ಆಸ್ಪತ್ರೆಗೆ ಭೇಟಿ ನೀಡಿ ಜಯಾ ಆರೋಗ್ಯ ವಿಚಾರಿಸಿದ ರಜನಿಕಾಂತ್
ರಜನಿಕಾಂತ್ - ಜಯಲಲಿತಾ (ಸಂಗ್ರಹ ಚಿತ್ರ)
Published On :
ಚೆನ್ನೈ: ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರು ಭಾನುವಾರ ಚೆನ್ನೈನ ಅಪೋಲೊ ಆಸ್ಪತ್ರೆಗೆ ಭೇಟಿ ನೀಡಿ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಆರೋಗ್ಯ ವಿಚಾರಿಸಿದ್ದಾರೆ.
ಇಂದು ಸಂಜೆ ತಮ್ಮ ಹಿರಿಯ ಪುತ್ರಿ ಐಶ್ವರ್ಯಾ ಅವರೊಂದಿಗೆ ಆಸ್ಪತ್ರೆಗೆ ಭೇಟಿ ನೀಡಿದ ರಜನಿಕಾಂತ್ ಅವರು, ಅಲ್ಲಿನ ವೈದ್ಯರಿಂದ ಜಯಲಲಿತಾ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದರು.
ಸೆ.22ರಿಂದ ಜಯಲಲಿತಾ ಅವರು ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆ ಮೂಲಗಳ ಪ್ರಕಾರ ತಮಿಳುನಾಡು ಸಿಎಂ ಇನ್ನೂ ತೀವ್ರ ನಿಗಾ ಘಟಕದಲ್ಲಿದ್ದು, ವೈದ್ಯರು ನಿರಂತರ ಚಿಕಿತ್ಸೆ ನೀಡುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.