ಪ್ರಧಾನ ಸುದ್ದಿ

ಮುಂಬೈ ಅಪಾರ್ಟ್ ಮೆಂಟ್ ನಲ್ಲಿ ಅಗ್ನಿ ದುರಂತ, 2 ಸಾವು

ವಾಣಿಜ್ಯ ನಗರಿ ಮುಂಬೈನಲ್ಲಿ ಮಂಗಳವಾರ ಬೆಳಗ್ಗೆ ಅಗ್ನಿ ದುರಂತವೊಂದು ಸಂಭವಿಸಿದ್ದು, ಮುಂಬೈನ ಕುಫಿ ಪರೇಡ್ ಪ್ರದೇಶದಲ್ಲಿ ಮೇಕರ್ ಟವರ್ ನಲ್ಲಿ ನಡೆದ ಅಗ್ನಿ ಅವಘಡದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಮುಂಬೈ ಅಪಾರ್ಟ್ ಮೆಂಟ್ ನಲ್ಲಿ ಅಗ್ನಿ ದುರಂತ, 2 ಸಾವು
ಮೇಕರ್ ಟವರ್ ನಲ್ಲಿ ಅಗ್ನಿ ದುರಂತ
Published On :

ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ಮಂಗಳವಾರ ಬೆಳಗ್ಗೆ ಅಗ್ನಿ ದುರಂತವೊಂದು ಸಂಭವಿಸಿದ್ದು, ಮುಂಬೈನ ಕುಫಿ ಪರೇಡ್ ಪ್ರದೇಶದಲ್ಲಿ ಮೇಕರ್ ಟವರ್ ನಲ್ಲಿ ನಡೆದ ಅಗ್ನಿ ಅವಘಡದಲ್ಲಿ  ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ದಕ್ಷಿಣ ಮುಂಬೈನ ಕುಫಿ ಪರೇಡ್ ನಲ್ಲಿರುವ ಮೇಕರ್ ಟವರ್ ಎಂಬ ಬೃಹತ್ ಅಪಾರ್ಟ್ ಮೆಂಟ್ ನ 20ನೇ ಅಂತಸ್ತಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು. ಬೆಂಕಿಯ ಕೆನ್ನಾಲಿಗೆಗೆ ಇಬ್ಬರು  ಸಾವನ್ನಪ್ಪಿದ್ದಾರೆ. ಇಂದು ಬೆಳಗ್ಗೆ ಸುಮಾರು 6.30ರ ಸುಮಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಜಾಜ್ ಎಲೆಕ್ಟ್ಕಿಕಲ್ಸ್ ಸಂಸ್ಥೆಯ ಮುಖ್ಯಸ್ಥ ಶೇಖರ್ ಬಜಾಜ್ ಅವರಿಗೆ ಸೇರಿದ ಆಪಾರ್ಟ್ ಮೆಂಟ್  ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.

ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿರುವ ಅಗ್ನಿ ಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಬೆಂಕಿಯ ಕೆನ್ನಾಲಿಗಿಗೆ ಅಕ್ಕಪಕ್ಕದ ಎರಡು ಆಪಾರ್ಟ್ ಮೆಂಟ್  ಗಳು ಸಂಪೂರ್ಣ ಸುಟ್ಟುಹೋಗಿದ್ದು, ಒಳಗಿದ್ದ ಪೀಠೋಪಕರಣಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಘಟನೆಯಲ್ಲಿ ಅಪಾಯಕ್ಕೆ ಸಿಲುಕಿದ್ದ ಮೂವರನ್ನು ರಕ್ಷಿಸಲಾಗಿದ್ದು, ಈ ಪೈಕಿ ಒಂದು ಕೂಡ  ಸೇರಿದೆ ಎಂದು ತಿಳಿದುಬಂದಿದೆ. ಈ ವರೆಗೂ ಅಗ್ನಿಶಾಮಕ ಸಿಬ್ಬಂದಿ ಒಟ್ಟು 11 ಮಂದಿಯನ್ನು ರಕ್ಷಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪ್ರಸ್ತುತ ಅಗ್ನಿ ದುರಂತ ಸಂಭವಿಸಿರುವ ಮೇಕರ್ ಟವರ್ ಅಪಾರ್ಟ್ ಮೆಂಟ್ ನಲ್ಲಿ ಸಾಕಷ್ಟು ಪ್ರತಿಷ್ಟಿತ ಗಣ್ಯರ ಆಪಾರ್ಟ್ ಮೆಂಟ್ ಗಳಿದ್ದು, ಲೇಖಕಿ ಶೋಭಾಡೇ ಅವರ ಆಪಾರ್ಟ್ ಮೆಂಟ್ ಕೂಡ  ಇದೇ ಟವರ್ ನಲ್ಲಿತ್ತು ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.