ನ್ಯಾಯಾಧಿಕರಣದ ತೀರ್ಪು ಸಂತಸ ತಂದಿದೆ: ಕರ್ನಾಟಕ ಪರ ವಕೀಲ ಮೋಹನ್ ಕಾತರಕಿ
ಕರ್ನಾಟಕದ ಪಾಲಿನ ನೀರಿನಲ್ಲಿ ಯಾವುದೇ ವ್ಯತ್ಯಾಸ ಮಾಡದೇ ಕೃಷ್ಣಾ ನ್ಯಾಯಾಧಿಕರಣ ನೀಡಿರುವ ತೀರ್ಪು ಸಂತಸ ತಂದಿದೆ ಎಂದು ಕರ್ನಾಟಕ ಪರ ವಕೀಲ ಮೋಹನ್ ಕಾತರಕಿ ತಿಳಿಸಿದ್ದಾರೆ.

ನವದೆಹಲಿ: ಕರ್ನಾಟಕದ ಪಾಲಿನ ನೀರಿನಲ್ಲಿ ಯಾವುದೇ ವ್ಯತ್ಯಾಸ ಮಾಡದೇ ಕೃಷ್ಣಾ ನ್ಯಾಯಾಧಿಕರಣ ನೀಡಿರುವ ತೀರ್ಪು ಸಂತಸ ತಂದಿದೆ ಎಂದು ಕರ್ನಾಟಕ ಪರ ವಕೀಲ ಮೋಹನ್ ಕಾತರಕಿ ತಿಳಿಸಿದ್ದಾರೆ.
ಬುಧವಾರ ಕೃಷ್ಣಾ ನ್ಯಾಯಾಧಿಕರಣದ ತೀರ್ಪು ಹೊರ ಬೀಳುತ್ತಿದ್ದಂತೆಯೇ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಮೋಹನ್ ಕಾತರಕಿ ಅವರು, ನ್ಯಾಯಾಧಿಕರಣದ ತೀರ್ಪಿನ ಅನ್ವಯ ಕರ್ನಾಟಕದ ಪಾಲಿನ ನೀರಿನಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಬದಲಿಗೆ ಈ ಹಿಂದೆ ಅವಿಭಜಿತ ಆಂಧ್ರ ಪ್ರದೇಶಕ್ಕೆ ಹಂಚಿಕೆ ಮಾಡಲಾಗಿದ್ದ ನೀರಿನ ಪ್ರಮಾಣದಲ್ಲೇ ತೆಲಂಗಾಣ ರಾಜ್ಯಕ್ಕೂ ನೀರು ಹಂಚಿಕೆ ಮಾಡಲಾಗಿದೆ. ಸೆಕ್ಷನ್ 89 ಆಂಧ್ರ ಪ್ರದೇಶ ರಾಜ್ಯ ನವೀಕರಣ ಕಾಯ್ದೆಯಡಿಯಲ್ಲಿ ತೆಲಂಗಾಣ ರಾಜ್ಯ ರಚನೆಯಾಗಿದೆ. ಹೀಗಾಗಿ ಆಂಧ್ರ ಪ್ರದೇಶಕ್ಕೆ ನೀಡಲಾಗಿರುವ ನೀರಲ್ಲೇ ತೆಲಂಗಾಣಕ್ಕೂ ಪಾಲು ನೀಡಬೇಕು ಎನ್ನುವ ನಮ್ಮ ವಾದಕ್ಕೆ ನ್ಯಾಯಾಧಿರಣ ಮನ್ನಣೆ ನೀಡಿದೆ ಎಂದು ಹೇಳಿದ್ದಾರೆ.
ಪ್ರಸ್ತುತ ನ್ಯಾಯಾಧಿಕರಣದ ತೀರ್ಪಿನಿಂದಾಗಿ ಕರ್ನಾಟಕದ ಪಾಲಿನ ನೀರಿನ ಮೇಲೆ ಯಾವುದೇ ವ್ಯತ್ಯಾಸವಾಗಿಲ್ಲ ಎಂದೂ ಮೋಹನ್ ಕಾತರಕಿ ಸ್ಪಷ್ಟಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


