ಪ್ರಧಾನ ಸುದ್ದಿ

ಕಾಣೆಯಾದ ಜೆ ಎನ್ ಯು ವಿದ್ಯಾರ್ಥಿ ಬಗ್ಗೆ ಸುಳಿವು ನೀಡಿದವರಿಗೆ 50 ಸಾವಿರ ರೂ ಬಹುಮಾನ

ಕಳೆದ ಐದು ದಿನಗಳಿಂದ ಕಾಣೆಯಾಗಿರುವ ಜವಾಹರ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ನಜೀಬ್ ಅಹಮದ್ ಬಗೆಗೆ ಸುಳಿವು ನೀಡಿದವರಿಗೆ 50 ಸಾವಿರ ರೂ ಬಹುಮಾನ ನೀಡುವುದಾಗಿ ದೆಹಲಿ

ಕಾಣೆಯಾದ ಜೆ ಎನ್ ಯು ವಿದ್ಯಾರ್ಥಿ ಬಗ್ಗೆ ಸುಳಿವು ನೀಡಿದವರಿಗೆ 50 ಸಾವಿರ ರೂ ಬಹುಮಾನ
ಸಾಂದರ್ಭಿಕ ಚಿತ್ರ
Published On :
ನವದೆಹಲಿ: ಕಳೆದ ಐದು ದಿನಗಳಿಂದ ಕಾಣೆಯಾಗಿರುವ ಜವಾಹರ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ನಜೀಬ್ ಅಹಮದ್ ಬಗೆಗೆ ಸುಳಿವು ನೀಡಿದವರಿಗೆ 50 ಸಾವಿರ ರೂ ಬಹುಮಾನ ನೀಡುವುದಾಗಿ ದೆಹಲಿ ಪೊಲೀಸರು ಘೋಷಿಸಿದ್ದಾರೆ. 
ಬುಧವಾರ ನೀಡಿರುವ ಆದೇಶದ ಪ್ರಕಾರ, ಕಾಣೆಯಾಗಿರುವ/ಅಪಹರಣವಾಗಿರುವ ಜೆ ಎನ್ ಯು ವಿದ್ಯಾರ್ಥಿ ನಜೀಬ್ ಅಹಮದ್ ಅವರ ಬಗ್ಗೆ ಮಾಹಿತಿ ಅಥವಾ ಸುಳಿವನ್ನು ವಸಂತಕುಂಜ್ ಉತ್ತರ ಪೊಲೀಸ್ ಸ್ಟೇಷನ್ ನ ಸ್ಟೇಷನ್ ಅಧಿಕಾರಿಗೆ ನೀಡುವಂತೆ ಕೋರಿದ್ದಾರೆ. 
ಅಹಮದ್ ಇರುವಿಕೆಯ ಬಗ್ಗೆ ಮಾಹಿತಿ ನೀಡಿದವರಿಗೆ 50 ಸಾವಿರ ರು ಬಹುಮಾನ ನೀಡುವುದಾಗಿ ಕೂಡ ಪೊಲೀಸರು ತಿಳಿಸಿದ್ದಾರೆ. 
ಎಬಿವಿಪಿ ವಿದ್ಯಾರ್ಥಿಗಳ ಜೊತೆಗಿನ ಕಾದಾಟದ ನಂತರ ಅಕ್ಟೋಬರ್ 15 ರಿಂದ ಅಹಮದ್, ಮಹಿ-ಮಾಂಡವಿ ಹಾಸ್ಟೆಲ್ ನಿಂದ ಕಾಣೆಯಾಗಿದ್ದಾರೆ. 
ಐಪಿಸಿ 365ರಡಿ ಪೊಲೀಸರಿಗೆ ರು ನೀಡಲಾಗಿದ್ದು, ವಿಶ್ವವಿದ್ಯಾಲಯ ಕೂಡ ಆಂತರಿಕ ತನಿಖೆಗೆ ಮುಂದಾಗಿದೆ. 
ಬುಧವಾರ ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಉಪಕುಲಪತಿ ಮತ್ತು ಹಿರಿಯ ಅಧಿಕಾರಿಗಳು ತಮ್ಮ ಕೋಣೆಯಿಂದ ಹೊರಬರದಂತೆ ಈ ವಿದ್ಯಾರ್ಥಿಗಳು ದಿಗ್ಬಂಧನ ಮಾಡಿದ್ದಾರೆ. ಈ ಪ್ರತಿಭಟನೆಯಲ್ಲಿ ಎಬಿವಿಪಿ ಸದಸ್ಯರು ಕೂಡ ಪಾಲ್ಗೊಂಡಿದ್ದು ವಿಶ್ವವಿದ್ಯಾಲಯದ ಅಧಿಕಾರಿಗಳ ವಿರುದ್ಧ ಹರಿಹಾಯ್ದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.