ಸಂಧಾನ ಸಭೆಗೆ ಹಾಜರಾಗಲು ಕೊನೆಗೂ ಗೋವಾ ಸಿಎಂ ಪರ್ಸೇಕರ್ ಒಪ್ಪಿಗೆ!
ಮಹದಾಯಿ ಜಲ ವಿವಾದಕ್ಕೆ ಸಂಬಂಧಿಸಿದ ಸಂಧಾನ ಸಭೆಗೆ ಹಾಜರಾಗಲು ಕೊನೆಗೂ ಗೋವಾ ಮುಖ್ಯಮಂತ್ರಿ ಲಕ್ಷ್ಮೀಕಾಂತ್ ಪರ್ಸೇಕರ್ ಅವರು ಒಪ್ಪಿಗೆ ನೀಡಿದ್ದು, ಶುಕ್ರವಾರ ನಡೆಯಬೇಕಿದ್ದ ಸಂಧಾನ ಸಭೆಯನ್ನು ನವೆಂಬರ್ 3ಕ್ಕೆ ಮುಂದೂಡಲಾಗಿದೆ.

ಪಣಜಿ: ಮಹದಾಯಿ ಜಲ ವಿವಾದಕ್ಕೆ ಸಂಬಂಧಿಸಿದ ಸಂಧಾನ ಸಭೆಗೆ ಹಾಜರಾಗಲು ಕೊನೆಗೂ ಗೋವಾ ಮುಖ್ಯಮಂತ್ರಿ ಲಕ್ಷ್ಮೀಕಾಂತ್ ಪರ್ಸೇಕರ್ ಅವರು ಒಪ್ಪಿಗೆ ನೀಡಿದ್ದು, ಶುಕ್ರವಾರ ನಡೆಯಬೇಕಿದ್ದ ಸಂಧಾನ ಸಭೆಯನ್ನು ನವೆಂಬರ್ 3ಕ್ಕೆ ಮುಂದೂಡಲಾಗಿದೆ.
ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಅವರ ನೇತೃತ್ವದಲ್ಲಿ ಇಂದು ಮುಂಬೈನಲ್ಲಿ ನಡೆಯಬೇಕಿದ್ದ ಸಂಧಾನ ಸಭೆ ಲಕ್ಷ್ಮೀಕಾಂತ್ ಅವರ ಗೈರು ಹಾಜರಿಯಿಂದಾಗಿ ರದ್ದಾಗಿದ್ದು, ಈ ಬಗ್ಗೆ ನಿನ್ನೆ ಸ್ವತಃ ಲಕ್ಷ್ಮೀಕಾಂತ್ ಅವರು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಅವರಿಗೆ ಪತ್ರವೊಂದನ್ನು ಬರೆದು ಸಭೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ. ಅಕ್ಟೋಬರ್ 21ರಂದು ತಾವು ಸಾಕಷ್ಟು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದು, ಅಂದು ನಾವು ಸಭೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸಭೆಯನ್ನು ಬೇರೆ ದಿನಾಂಕಕ್ಕೆ ಮುಂದೂಡಿ ಎಂದು ಹೇಳಿದ್ದಾರೆ.
ಹೀಗಾಗಿ ಇಂದು ನಡೆಯಬೇಕಿದ್ದ ಸಂಧಾನ ಸಭೆಯನ್ನು ರದ್ದು ಮಾಡುವ ಬದಲು ಸಭೆಯನ್ನು ಇದೇ ನವೆಂಬರ್ 3ಕ್ಕೆ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ ವಾಣಿಜ್ಯ ನಗರಿ ಮುಂಬೈನಲ್ಲೇ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನಿವಿಸ್ ಅವರ ನೇತೃತ್ವದಲ್ಲಿ ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯದ ಸಿಎಂ ಗಳು ಹಾಗೂ ನೀರಾವರಿ ತಜ್ಞರು ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


