ಆತ್ಮಹತ್ಯೆಗೂ ಮುನ್ನ ಕುಟುಂಬದ ಬಗ್ಗೆ ಯೋಚಿಸಿ: ಪೊಲೀಸರಿಗೆ ಸಿಎಂ ಸಿದ್ದರಾಮಯ್ಯ ಮನವಿ
ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ನಿಮ್ಮ ಕುಟುಂಬದ ಬಗ್ಗೆ ಯೋಚಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ...

Published On :
ಬೆಂಗಳೂರು: ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ನಿಮ್ಮ ಕುಟುಂಬದ ಬಗ್ಗೆ ಯೋಚಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಪೊಲೀಸರಿಗೆ ಮನವಿ ಮಾಡಿದ್ದಾರೆ.
ಪೊಲೀಸ್ ಸಂಸ್ಮರಣಾ ದಿನಾಚರಣೆಯ ಅಂಗವಾಗಿ ಇಂದು ಕೋರಮಂಗಲದ ಕೆ.ಎಸ್.ಆರ್.ಪಿ ಮೈದಾನದಲ್ಲಿ ಹುತಾತ್ಮ ಪೊಲೀಸರಿಗೆ ಗೌರವ ಸಲ್ಲಿಸಿ ಮಾತನಾಡಿದ ಸಿಎಂ, ಪೊಲೀಸರು ಹೆಚ್ಚಿನ ಆತಸ್ಥೈರ್ಯ ಹೊಂದಿ ಕರ್ತವ್ಯ ನಿರ್ವಹಿಸಬೇಕು. ಯಾರೂ ಆತ್ಮಹತ್ಯೆ ಮಾಡಿಕೊಳ್ಳುವ ದುಸ್ಸಾಹಸಕ್ಕೆ ಮುಂದಾಗಬಾರದು ಎಂದರು.
'ಪೊಲೀಸರು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ತಮ್ಮ ಕುಟುಂಬದ ಬಗ್ಗೆ ಯೋಚಿಸಬೇಕು. ತಾನು ಸಾಯುವುದರಿಂದ ತಂದೆ,ತಾಯಿ .ಪತ್ನಿ ಮಕ್ಕಳಿಗಾಗುವ ಸಂಕಷ್ಟದ ಕುರಿತು ಯೋಚನೆ ಮಾಡಬೇಕು. ಪೊಲೀಸರಿಗೆ ಎಲ್ಲಾ ರೀತಿಯ ನೆರವು ಸರಕಾರದ ವತಿಯಿಂದ ಕಲ್ಪಿಸಲಾಗುತ್ತಿದ್ದು ,ಅವರ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಸರಕಾರ ಕ್ರಮ ಕೈಗೊಂಡಿದ್ದು, ಬೆಂಗಳೂರಿಗೆ ಕರ್ತವ್ಯ ನಿಮಿತ್ತ ಆಗಮಿಸಿದ ವೇಳೆ ವಸತಿ ಸೌಕರ್ಯಕ್ಕೂ ವ್ಯವಸ್ಥೆ ಮಾಡಿರುವುದಾಗಿ ತಿಳಿಸಿದರು.
ಸಮಾಜದಲ್ಲಿ ಶಾಂತಿ ನೆಲೆಸಲು, ದೇಶದ ಅಭಿವೃದ್ಧಿಗೆ ಕಾನೂನು ಸುವ್ಯವಸ್ಥೆ ಮುಖ್ಯ. ಪೊಲೀಸ್ ಇಲಾಖೆ ಸಮಾಜದ ರಕ್ಷಣೆಯನ್ನು ನಿರಂತರವಾಗಿ ಮಾಡುತ್ತಿದೆ. ಪೊಲೀಸರು ತಮ್ಮ ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಪೊಲೀಸರ ಪಾತ್ರ ಹಿರಿದು. ಪೊಲೀಸರು ದಕ್ಷತೆಯಿಂದ ಕಾರ್ಯ ನಿರ್ವಹಿಸಲು ನಮ್ಮ ಸರ್ಕಾರ ಅನೇಕ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
ರಾಜ್ಯದಲ್ಲಿ ಪ್ರಸಕ್ತ ವರ್ಷ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯಲ್ಲಿ 22 ಮಂದಿ ಪೊಲೀಸ್ ಸಿಬಂದಿ ಹುತಾತ್ಮರಾಗಿದ್ದು ದೇಶದಲ್ಲಿ 473 ಸಿಬಂದಿ ಹುತಾತ್ಮರಾಗಿದ್ದಾರೆ.
ಸಮಾರಂಭದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್, ನಟ ಯಶ್,ಪೊಲೀಸ್ ಅಧಿಕಾರಿಗಳು ಸೇರಿದಂತೆ ಗಣ್ಯರು ಭಾಗಿಯಾಗಿ ಹುತಾತ್ಮರಿಗೆ ಪುಷ್ಪನಮನ ಸಲ್ಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


