ಪ್ರಧಾನ ಸುದ್ದಿ

ವಾರಣಾಸಿಯಲ್ಲಿ ಸ್ಫೋಟ; ಐವರ ಸಾವು

ವಾರಣಾಸಿಯಲ್ಲಿ ಘಟಿಸಿರುವ ಸ್ಫೋಟಕ್ಕೆ ಐವರು ಸಾವನ್ನಪ್ಪಿದ್ದು, ಆರಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ಹೇಳಿದ್ದಾರೆ.

ವಾರಣಾಸಿಯಲ್ಲಿ ಸ್ಫೋಟ; ಐವರ ಸಾವು
ಸಾಂದರ್ಭಿಕ ಚಿತ್ರ
Published On :
ವಾರಣಾಸಿ: ವಾರಣಾಸಿಯಲ್ಲಿ ಘಟಿಸಿರುವ ಸ್ಫೋಟಕ್ಕೆ ಐವರು ಸಾವನ್ನಪ್ಪಿದ್ದು, ಆರಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ಹೇಳಿದ್ದಾರೆ. 
"ಮೇಲ್ನೋಟಕ್ಕೆ, ದೀಪಾವಳಿ ಹಬ್ಬಕ್ಕೆ ಶೇಖರಿಸಿದ್ದ ಪಟಾಕಿಗಳು ಸಿಡಿದು ಈ ಸ್ಫೋಟ ಸಂಭವಿಸಿದೆ ಎಂದೆನಿಸುತ್ತದೆ" ಎಂದು ಹಿರಿಯ ಪೊಲೀಸ್ ಸೂಪರಿಂಟೆಂಡೆಂಟ್ ನಿತಿನ್ ತಿವಾರಿ ಹೇಳಿದ್ದಾರೆ. 
ಮೃತಪಟ್ಟವರಲ್ಲಿ ಇಬ್ಬರನ್ನು ಆಮ್ನ ಮತ್ತು ಸರ್ಫರಾಜ್ ಎಂದು ಗುರುತಿಸಲಾಗಿದ್ದು, ಉಳಿದವರ ಗುರುತು ಇನ್ನು ತಿಳಿಯಬೇಕಿದೆ. 
ರಾಷ್ಟ್ರೀಯ ತುರ್ತು ನಿರ್ವಹಣಾ ಪಡೆಯ ತಂಡ ಸ್ಥಳಕ್ಕೆ ಧಾವಿಸಿದ್ದು, ಅವಶೇಷಗಳಡಿ ಸಿಲಿಕಿರುವವರನ್ನು ರಕ್ಷಿಸಲು ಪ್ರಯತ್ನಿಸುತ್ತಿವೆ ಎಂದು ಅಧಿಕಾರಿ ಹೇಳಿದ್ದಾರೆ. 
ಪಿತರಿಕುಂಡ್ ರಸ್ತೆಯಲ್ಲಿರುವ ಎರಡು ಅಂತಸ್ತಿನ ಮನೆಯಲ್ಲಿ ಮಂಗಳವಾರ ಮಧ್ಯರಾತ್ರಿ ಈ ಸ್ಫೋಟ ಸಂಭವಿಸಿದೆ. ಗಾಯಗೊಂಡ ಒಬ್ಬ ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.