ಸಮಾಜವಾದಿ ಪಕ್ಷದ ರಜತ ಮಹೋತ್ಸವಕ್ಕೆ ನಿತೀಶ್ ಕುಮಾರ್ ಗೈರು ಸಾಧ್ಯತೆ
ನವೆಂಬರ್ ಮೊದಲ ವಾರದಲ್ಲಿ ಉತ್ತರ ಪ್ರದೇಶದಲ್ಲಿ ನಡೆಯುವ ಸಮಾಜವಾದಿ ಪಕ್ಷದ ರಜತ ಮಹೋತ್ಸವ ಕಾರ್ಯಕ್ರಮಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್

ಪಾಟ್ನಾ: ನವೆಂಬರ್ ಮೊದಲ ವಾರದಲ್ಲಿ ಉತ್ತರ ಪ್ರದೇಶದಲ್ಲಿ ನಡೆಯುವ ಸಮಾಜವಾದಿ ಪಕ್ಷದ ರಜತ ಮಹೋತ್ಸವ ಕಾರ್ಯಕ್ರಮಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಗೈರಾಗುವ ಸಾಧ್ಯತೆಯಿದೆ.
ಸಮಾಜವಾದಿ ಪಕ್ಷದ ಮುಖಂಡ ಶಿವಪಾಲ್ ಯಾದವ್ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಾರೆ.
ಆದರೆ ನವೆಂಬರ್ 5 ರಂದು ಬಿಹೀರದಲಿಲು ಪ್ರಸಿದ್ಧ ಚಾತ್ ಪೂಜಾ ಹಬ್ಬವಿದ್ದು, ಅದರಲ್ಲಿ ಪಾಲ್ಗೊಳ್ಳಬೇಕಿದೆ. ಹೀಗಾಗಿ ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಲಾಗಿದೆ.
ಆದರೆ ಲಾಲು ಪ್ರಸಾದ್ ಯಾದವ್ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


