ಪ್ರಧಾನ ಸುದ್ದಿ

ಭಾರತ್ ಬಂದ್ ಗೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ, ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ ಸಂಚಾರ ಆರಂಭ

ಕೇಂದ್ರ ಸರ್ಕಾರದ ನೂತನ ಕಾರ್ಮಿಕ ನೀತಿ ವಿರೋಧಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ ಗೆ ರಾಜ್ಯದಲ್ಲಿ...

ಭಾರತ್ ಬಂದ್ ಗೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ, ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ ಸಂಚಾರ ಆರಂಭ
ದೆಹಲಿಯಲ್ಲಿ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ
Published On :
ಬೆಂಗಳೂರು: ಕೇಂದ್ರ ಸರ್ಕಾರದ ನೂತನ ಕಾರ್ಮಿಕ ನೀತಿ ವಿರೋಧಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಶುಕ್ರವಾರ ಕರೆ ನೀಡಿದ್ದ ಭಾರತ್ ಬಂದ್ ಗೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಕರ್ನಾಟಕದ ಹಲವೆಡೆ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ದೊರೆತಿದೆಯಾದರೂ, ಸರ್ಕಾರಿ ಬಸ್ ಸೇವೆಗಳು ಸ್ಥಗಿತಗೊಂಡ ಹಿನ್ನಲೆಯಲ್ಲಿ ಪ್ರಯಾಣಿಕರು ಪರದಾಡುವಂತಾಗಿತ್ತು. ಆದರೆ ಈಗ ನಿಧಾನವಾಗಿ ಬಿಎಂಟಿಸಿ ಹಾಗೂ ಕೆಎಸ್ಆರ್ ಟಿ ಬಸ್ ಸಂಚಾರ ಆರಂಭಗೊಂಡಿದ್ದು, ಸಿಲಿಕಾನ್ ಸಿಟಿಯ ಜನಜೀವನ ಯತಾಸ್ಥಿತಿಗೆ ಮರಳುತ್ತಿದೆ.
ಶಿವಾಜಿನಗರದಿಂದ ಹಲವು ಬಿಎಂಟಿಸಿ ಬಸ್ ಗಳ ಸಂಚಾರ ಆರಂಭಗೊಂಡಿದ್ದು, ಸಿಟಿ ಮಾರ್ಕೆಟ್, ಮೆಜಸ್ಟಿಕ್ ಹಾಗೂ ಕೆಂಗೇರಿ ಸೇರಿದಂತೆ ವಿವಿಧ ಮಾರ್ಗಗಳಲ್ಲಿ ಬಸ್ ಗಳು ಸಂಚರಿಸುತ್ತಿವೆ.
ತುಮಕೂರು, ಯಾದಗಿರಿ, ಕೋಲಾರ, ಚಿಕ್ಕಮಗಳೂರು, ಪುತ್ತೂರು ಜಿಲ್ಲೆಗಳಲ್ಲಿ ಬಂದ್ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರದಲ್ಲಿ ಅಲ್ಪ ಪ್ರಮಾಣದ  ಬಸ್ ಗಳು ಸಂಚಾರ ಆರಂಭಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.