ಪ್ರಧಾನ ಸುದ್ದಿ

ನಾಳೆ ರಾಜ್ಯ ಸಚಿವ ಸಂಪುಟ ವಿಸ್ತರಣೆ, ಎಂ.ಕೃಷ್ಣಪ್ಪಗೆ ಸಚಿವಗಿರಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ತಮ್ಮ ಸಚಿವ ಸಂಪುಟ ವಿಸ್ತರಣೆ ಮಾಡುತ್ತಿದ್ದು, ವಿಜಯನಗರ ಶಾಸಕ ಎಂ.ಕೃಷ್ಣಪ್ಪ...

ನಾಳೆ ರಾಜ್ಯ ಸಚಿವ ಸಂಪುಟ ವಿಸ್ತರಣೆ, ಎಂ.ಕೃಷ್ಣಪ್ಪಗೆ ಸಚಿವಗಿರಿ
ಎಂ.ಕೃಷ್ಣಪ್ಪ
Published On :
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ತಮ್ಮ ಸಚಿವ ಸಂಪುಟ ವಿಸ್ತರಣೆ ಮಾಡುತ್ತಿದ್ದು, ವಿಜಯನಗರ ಶಾಸಕ ಎಂ.ಕೃಷ್ಣಪ್ಪ ಅವರು ನೂತನ ಸಚಿವರಾಗಿ ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ನಾಳೆ ಮಧ್ಯಾಹ್ನ ಸಂಜೆ 4 ಗಂಟೆಗೆ ರಾಜಭವನದಲ್ಲಿ ಎಂ.ಕೃಷ್ಣಪ್ಪ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಎಂ.ಕೃಷ್ಣಪ್ಪಗೆ ವಸತಿ ಖಾತೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಅಲ್ಲದೇ ರಾಜ್ಯಖಾತೆ ಸಚಿವರಾಗಿರುವ ವಿನಯ್ ಕುಲಕರ್ಣಿ ಹಾಗೂ ಎ.ಮಂಜು ಅವರಿಗೆ ಕ್ಯಾಬಿನೆಟ್ ದರ್ಜೆಗೆ ಬಡ್ತಿ ನೀಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಒಟ್ಟು 14 ಹಾಲಿ ಸಚಿವರನ್ನು ಸಂಪುಟದಿಂದ ಕೈ ಬಿಟ್ಟು, 13 ಶಾಸಕರನ್ನು ಸಿದ್ದರಾಮಯ್ಯ ಅವರು ಸಂಪುಟಕ್ಕೆ ಸೇರಿಸಿಕೊಂಡಿದ್ದರು. ಜೊತೆಗೆ ಸಚಿವ ಸ್ಥಾನಕ್ಕೆ ಕೆಜೆ ಜಾರ್ಜ್ ಅವರು ರಾಜೀನಾಮೆ ನೀಡಿದ್ದು, ಬಾಕಿ ಉಳಿದಿರುವ ಸ್ಥಾನವನ್ನು ತುಂಬಲು ಸಿದ್ದರಾಮಯ್ಯ ಅವರು ಮುಂದಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.