"ಕಾವೇರಿ"ದ ಹೋರಾಟ; ಶುಕ್ರವಾರ ಕರ್ನಾಟಕ ಬಂದ್
ತಮಿಳುನಾಡಿಗೆ ನೀರು ಬಿಡುವಂತೆ ಕರ್ನಾಟಕಕ್ಕೆ ಆದೇಶಿಸಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಶುಕ್ರವಾರ ಕರ್ನಾಟಕ ಬಂದ್ ಗೆ ಕರೆ ನೀಡಿವೆ.

ಬೆಂಗಳೂರು: ತಮಿಳುನಾಡು ರಾಜ್ಯಕ್ಕೆ ನೀರು ಬಿಡುವಂತೆ ಕರ್ನಾಟಕಕ್ಕೆ ಆದೇಶಿಸಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಶುಕ್ರವಾರ ಕರ್ನಾಟಕ ಬಂದ್ ಗೆ ಕರೆ ನೀಡಿವೆ.
ಕಾವೇರಿ ನೀರು ಬಿಡುವಂತೆ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ಆದೇಶ ನೀಡಿದ ಬೆನ್ನಲ್ಲೇ ಕರ್ನಾಟಕದಲ್ಲಿ ರೈತ ಸಂಘಗಳ ಪ್ರತಿಭಟನೆ ಕಾವೇರಿದ್ದು, ಕನ್ನಡಪರ ಸಂಘಟನೆಗಳು ಕೂಡ ಇದೀಗ ಪ್ರತಿಭಟನೆಗೆ ಧುಮುಕಿವೆ. ಈ ಬಗ್ಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕನ್ನಡ ವಾಟಾಳ್ ಚಳುವಳಿ ಪಕ್ಷದ ನಾಯಕ ವಾಟಾಳ್ ನಾಗರಾಜ್ ಅವರು ಸುಪ್ರೀಂ ಕೋರ್ಟ್ ತೀರ್ಪು ಪ್ರಶ್ನಿಸಿ ಶುಕ್ರವಾರ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ ಎಂದು ತಿಳಿಸಿದರು.
ಈ ವೇಳೆ ಕೇಂದ್ರ ಸರ್ಕಾರ ಹಾಗೂ ನ್ಯಾಯಾಧಿಕರಣದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಕಾವೇರ ವಿಚಾರದಲ್ಲಿ ಪದೇ ಪದೇ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ. ಹೀಗಾಗಿ ಕನ್ನಡಿಗರ ಪ್ರತಿಭಟನೆಯನ್ನು ಬಂದ್ ಮೂಲಕ ಕೇಂದ್ರ ಸರ್ಕಾರಕ್ಕೆ ತಿಳಿಸಬೇಕಿದೆ ಎಂದು ಹೇಳಿದರು. ಇದೇ ವೇಳೆ ಪದೇ ಪದೇ ಬಂದ್ ಮಾಡುವ ಕುರಿತು ಕೇಳಿದ ಪ್ರಶ್ನೆಗೆ ಖಾರವಾಗಿ ಪ್ರತಿಕ್ರಿಯಿಸಿದ ಅವರು, ಪದೇ ಪದೇ ಬಂದ್ ಮಾಡುವ ಹುಚ್ಚುತನ ನಮಗಿಲ್ಲ. ಆದರೆ ಇದು ಕಾವೇರಿ ಮತ್ತು ಕನ್ನಡಿಗರ ವಿಚಾರವಾಗಿದ್ದು, ಕನ್ನಡಿಗರ ಶಕ್ತಿ ಏನು ಎಂಬುದನ್ನು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಬೇಕಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಹಾಜರಿದ್ದ ಸಾರಾ ಗೋವಿಂದು ಅವರು ಕರ್ನಾಟಕ ಬಂದ್ ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಬೆಂಬಲವಿದೆ. ಶುಕ್ರವಾರ ಕರೆ ನೀಡಲಾಗಿರುವ ಬಂದ್ ಗೆ ಚಿತ್ರೋಧ್ಯಮದ ಸಂಪೂರ್ಣ ಬೆಂಬಲಿವಿದ್ದು, ಅಂದು ಸಂಪೂರ್ಣ ಚಿತ್ರರಂಗ ಬಂದ್ ಗೆ ಬೆಂಬಲ ನೀಡಲಿದೆ ಎಂದು ಹೇಳಿದರು. ಅಂತೆಯೇ ಕಾವೇರಿಗಾಗಿ ಹೋರಾಟ ಅನಿವಾರ್ಯವಾಗಿದ್ದು, ನ್ಯಾಯಾಲಯ ಕಣ್ಮುಚ್ಚಿ ತೀರ್ಮಾನ ನೀಡುತ್ತಿದೆ. ನ್ಯಾಯಾಲಯದಲ್ಲಿ ಯಾವಾಗಲೂ ತಮಿಳುನಾಡು ವಾದವೇ ಮೇಲಾಗುತ್ತೆ ಏಕೆ ಎಂದು ಸುಪ್ರೀಂಕೋರ್ಟ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


