ದಕ್ಷಿಣ ಏಷ್ಯಾದ ಒಂದು ದೇಶದಿಂದ ಭಯೋತ್ಪಾದನೆ ವಿಸ್ತರಣೆ: ಪ್ರಧಾನಿ ಮೋದಿ
ದಕ್ಷಿಣ ಏಷ್ಯಾದ ಒಂದು ದೇಶ ತನ್ನ ಏಜೆಂಟ್ ಗಳ ಮೂಲಕ ವಿಶ್ವದಲ್ಲಿ ಭಯೋತ್ಪಾದನೆಯನ್ನು ಪಸರಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ಪರೋಕ್ಷವಾಗಿ ತಿವಿದಿದ್ದಾರೆ.

ಹ್ಯಾಂಗ್ ಜೌ: ದಕ್ಷಿಣ ಏಷ್ಯಾದ ಒಂದು ದೇಶ ತನ್ನ ಏಜೆಂಟ್ ಗಳ ಮೂಲಕ ವಿಶ್ವದಲ್ಲಿ ಭಯೋತ್ಪಾದನೆಯನ್ನು ಪಸರಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ಪರೋಕ್ಷವಾಗಿ ತಿವಿದಿದ್ದಾರೆ.
ಚೀನಾದ ಹ್ಯಾಂಗ್ ಜೌ ನಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ ಭಯೋತ್ಪಾದನೆ ವಿಚಾರ ಪ್ರಸ್ತಾಪಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದಕ್ಷಿಣ ಏಷ್ಯಾದ ಒಂದು ದೇಶ ತನ್ನ ಏಜೆಂಟ್ ಗಳ ಮೂಲಕ ವಿಶ್ವದಲ್ಲಿ ಭಯೋತ್ಪಾದನೆಯನ್ನು ಪಸರಿಸುತ್ತಿದೆ ಎಂದು ಹೇಳಿದರು.
ಜಿ 20 ಶೃಂಗದಲ್ಲಿ ಬ್ರಿಕ್ಸ್ ರಾಷ್ಟ್ರಗಳ ಪ್ರತ್ಯೇಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಧಾನಿ ಮೋದಿ, ಉಗ್ರರ ವಿರುದ್ಧ ಜಂಟಿ ಕಾರ್ಯಾಚರಣೆಯನ್ನು ಇನ್ನಷ್ಟು ತೀವ್ರಗೊಳಿಸುವಂತೆ ಸದಸ್ಯ ರಾಷ್ಟ್ರಗಳಿಗೆ ಕರೆ ನೀಡಿದರು. ಅಂತೆಯೇ ಉಗ್ರರಿಗೆ ಹಣಕಾಸು ಮತ್ತಿತರ ನೆರವು ನೀಡುತ್ತಿರುವವರ ವಿರುದ್ಧ ಸಂಘಟಿತ ಕ್ರಮ ಕೈಗೊಳ್ಳಬೇಕಿದೆ ಎಂದು ಪರೋಕ್ಷವಾಗಿ ಪಾಕಿಸ್ತಾನವನ್ನು ತರಾಟೆಗೆ ತೆಗೆದುಕೊಂಡರು.
"ದಕ್ಷಿಣ ಏಷ್ಯಾ ಅಥವಾ ವಿಶ್ವದ ಯಾವುದೇ ಭಾಗದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಉಗ್ರರು ಬ್ಯಾಂಕ್ ಅಥವಾ ಶಸ್ತ್ರಾಸ್ತ್ರ ಕಾರ್ಖಾನೆ ಹೊಂದಿಲ್ಲ. ಹೀಗಿದ್ದರೂ ಉಗ್ರರ ಕೈಗೆ ಶಸ್ತ್ರಾಸ್ತ್ರಗಳು ಸರಾಗವಾಗಿ ಸೇರುತ್ತಿವೆ. ಅವರಿಗೆ ಬೇರೊಬ್ಬರು ನೆರವು ನೀಡುತ್ತಿರುವುದು ಇದರಿಂದ ಸ್ಪಷ್ಟವಾಗಿದೆ. ಇಂಥಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಬ್ರಿಕ್ಸ್ ರಾಷ್ಟ್ರಗಳು ಪಣ ತೊಡಬೇಕು. ಕೆಲ ದೇಶಗಳಲ್ಲಿ ಭಯೋತ್ಪಾದನೆಯನ್ನೇ ಆಡಳಿತ ನೀತಿಯನ್ನಾಗಿಸಿಕೊಂಡಿದ್ದಾರೆ. ಇದು ಇಡೀ ವಿಶ್ವಕ್ಕೇ ದೊಡ್ಡ ರಕ್ಷಣಾ ಸವಾಲಾಗಿ ಎದುರಾಗಿದ್ದು, ಇದನ್ನು ತಡೆಯುನ ಅನಿವಾರ್ಯತೆ ಸೃಷ್ಟಿಯಾಗಿದೆ" ಎಂದು ಮೋದಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


