ತಮಿಳುನಾಡಿಗೆ ನೀರು: ಮಂಡ್ಯದಲ್ಲಿ 'ಕಾವೇರಿ'ದ ಪ್ರತಿಭಟನೆ
ತಮಿಳುನಾಡಿಗೆ ನೀರು ಬಿಡುವಂತೆ ಕರ್ನಾಟಕಕ್ಕೆ ಆದೇಶಿಸಿರುವ ಸುಪ್ರೀಂಕೋರ್ಟ್ ತೀರ್ಪನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಮಂಡ್ಯದಲ್ಲಿ ಪ್ರತಿಭಟನೆ ನಡೆಸುತ್ತಿವೆ...

ಮಂಡ್ಯ: ತಮಿಳುನಾಡಿಗೆ ನೀರು ಬಿಡುವಂತೆ ಕರ್ನಾಟಕಕ್ಕೆ ಆದೇಶಿಸಿರುವ ಸುಪ್ರೀಂಕೋರ್ಟ್ ತೀರ್ಪನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಮಂಡ್ಯದಲ್ಲಿ ಪ್ರತಿಭಟನೆ ನಡೆಸುತ್ತಿವೆ.
ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ರಸ್ತೆ ಮಧ್ಯೆ ಉರುಳು ಸೇವೆ ಮಾಡುವ ಮೂಲಕ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾಕಾರರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿದ ಪ್ರತಿಭಟನೆ ನಡೆಸುತ್ತಿರುವುದರಿಂದ ರಸ್ತೆ ಸಂಚಾರ ಅಸ್ತವಸ್ಯಗೊಂಡಿದೆ. ಇನ್ನು ಬೆಂಗಳೂರು-ಮೈಸೂರು ನಡುವೆ ಸಂಚರಿಸುವ ಸರ್ಕಾರಿ ಬಸ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
ಇದೇ ವೇಳೆ ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಪದೇ ಪದೇ ಅನ್ಯಾಯವಾಗುತ್ತಿದ್ದು, ಕಾವೇರಿ ನದಿ ನೀರು ಹಂಚಿಕೆ ಪರ ವಾದಿಸುತ್ತಿರುವ ರಾಜ್ಯದ ಪರ ವಕೀಲರಾದ ಪಾಲಿ ನಾರಿಮನ್ ರನ್ನು ಕೈಬಿಡುವಂತೆ ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ. ಮಾದೇಗೌಡ ಅವರು ಹೇಳಿದ್ದಾರೆ.
ಕನ್ನಡ ಪರ ಸಂಘಟನೆಗಳು ಮಂಡ್ಯದಲ್ಲಿ ಪ್ರತಿಭಟನೆ ನಡೆಸುತ್ತಿರುವುದರಿಂದ ಇಂದು ಶಾಲಾ-ಕಾಲೇಜುಗಳಿಗೆ ಮಂಡ್ಯ ಜಿಲ್ಲಾಧಿಕಾರಿ ಎಸ್ ಜಿಯಾವುಲ್ಲಾ ರಜೆ ಘೋಷಿಸಿದ್ದಾರೆ.
ತಮಿಳುನಾಡಿಗೆ ಪ್ರತಿ ದಿನ 15 ಸಾವಿರ ಕ್ಯೂಸೆಕ್ಸ್ ನೀರನ್ನು 10 ದಿನ ಕಾಲ ಹರಿಸುವಂತೆ ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಆದೇಶ ನೀಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


