ಪ್ರಧಾನ ಸುದ್ದಿ

ಉಚ್ಛಾಟಿತ ಎಎಪಿ ಮಾಜಿ ಸಚಿವ ಸಂದೀಪ್ ಕುಮಾರ್ 14 ದಿನ ನ್ಯಾಯಾಂಗ ಬಂಧನಕ್ಕೆ

ಉಚ್ಛಾಟಿತ ಎಎಪಿ ಮಾಜಿ ಸಚಿವ ಸಂದೀಪ್ ಕುಮಾರ್ ಅವರನ್ನು ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ಅವರ ಜೊತೆಗೆ ವಿಡಿಯೋದಲ್ಲಿ ಕಂಡುಬಂದಿದ್ದ ಮಹಿಳೆ

ಉಚ್ಛಾಟಿತ ಎಎಪಿ ಮಾಜಿ ಸಚಿವ ಸಂದೀಪ್ ಕುಮಾರ್ 14 ದಿನ ನ್ಯಾಯಾಂಗ ಬಂಧನಕ್ಕೆ
ಉಚ್ಛಾಟಿತ ಎಎಪಿ ಮಾಜಿ ಸಚಿವ ಸಂದೀಪ್ ಕುಮಾರ್
Published On :
ನವದೆಹಲಿ: ಉಚ್ಛಾಟಿತ ಎಎಪಿ ಮಾಜಿ ಸಚಿವ ಸಂದೀಪ್ ಕುಮಾರ್ ಅವರನ್ನು ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ಅವರ ಜೊತೆಗೆ ವಿಡಿಯೋದಲ್ಲಿ ಕಂಡುಬಂದಿದ್ದ ಮಹಿಳೆ ದೂರು ನೀಡಿದ್ದ ಪ್ರಕರಣದಲ್ಲಿ ಸಂದೀಪ್ ಅವರನ್ನು ಬಂಧಿಸಲಾಗಿತ್ತು.
ಪೊಲೀಸ್ ಬಂಧನ ಅವಧಿ ಮುಗಿದಿದ್ದರಿಂದ ಸಂದೀಪ್ ಅವರನ್ನು ವಿಶೇಷ ನ್ಯಾಯಾಧೀಶರಾದ ಪೂನಂ ಚೌಧರಿ ಮುಂದೆ ಹಾಜರು ಪಡಿಸಿದ ನಂತರ, ನ್ಯಾಯಾಂಗ ಬಂಧನ ಅವಧಿಯನ್ನು ಸೆಪ್ಟೆಂಬರ್ 23 ರವರೆಗೆ ವಿಸ್ತರಿಸಲಾಗಿದೆ. 
ಆರೋಪಿಯನ್ನು ಇನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಬೇಕು ಎಂದು ಪೊಲೀಸರು ಹೇಳಿದ್ದಾರೆ. 
ತಮ್ಮ ವಿರುದ್ಧ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಮಹಿಳೆ ದೂರಿದ್ದಕ್ಕೆ ಸುಲ್ತಾನಪುರಿ ಪೊಲೀಸರು ಶನಿವಾರ ದೆಹಲಿಯ ಮಾಜಿ ಸಾಮಾಜಿಕ ಅಭಿವೃದ್ಧಿ ಹಾಗು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವನನ್ನು ಬಂಧಿಸಿದ್ದರು. 
ಐಪಿಸಿ ಸೆಕ್ಷನ್ 376 (ರೇಪ್) ಮತ್ತು 328 ರಡಿ ಸಂದೀಪ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.