ತಮಿಳುನಾಡಿನಲ್ಲಿ ಕನ್ನಡಿಗರ ರಕ್ಷಣೆ ಸೂಕ್ತ ಕ್ರಮ ಕೈಗೊಳ್ಳಿ: ಜಯಾಗೆ ಸಿದ್ದು ಪತ್ರ
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಕಳೆದೆರಡು ದಿನಗಳಿಂದ ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ನಡೆಯುತ್ತಿರುವ ದಾಳಿಯನ್ನು ಖಂಡಿಸಿ ಮುಖ್ಯಮಂತ್ರಿ...

Published On :
ಬೆಂಗಳೂರು: ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಕಳೆದೆರಡು ದಿನಗಳಿಂದ ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ನಡೆಯುತ್ತಿರುವ ದಾಳಿಯನ್ನು ಖಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾಗೆ ಪತ್ರ ಬರೆದಿದ್ದಾರೆ.
ಆತ್ಮೀಯ ಜಯಲಲಿತಾ ಅವರೇ, ತಮಿಳುನಾಡಿನಲ್ಲಿ ಕಳೆದ ಎರಡು ದಿನಗಳಿಂದ ಕನ್ನಡಿಗರ ಮೇಲೆ ಹಲ್ಲೆ, ಅವರ ಆಸ್ತಿ ಪಾಸ್ತಿಗಳ ಮೇಲೆ ದಾಳಿ ನಡೆಯುತ್ತಿರುವ ವಿಚಾರ ನನ್ನ ಗಮನಕ್ಕೆ ಬಂದಿದೆ. ಪ್ರಕರಣವೊಂದರಲ್ಲಿ ಭಾಗಿಯಾಗುವ ಬೆಂಗಳೂರಿನ ಯುವಕ ಸಂತೋಷ್ ಎಂಬುವರ ವಿರುದ್ಧ ಇಲ್ಲಿನ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಸಂತೋಷ್ ಮೇಲಿನ ಹಲ್ಲೆ ಪ್ರಕರಣದಲ್ಲಿ ತಮಿಳುನಾಡು ಮಾಧ್ಯಮಗಳು ನೀಡಿದ ಅತಿರೇಕ ಮತ್ತು ವೈಭವೀಕರಣದ ವರದಿಗಳು ಅಲ್ಲಿನವರಲ್ಲಿ ಭಾವೋದ್ವೇಗವನ್ನು ಪ್ರಚೋದಿಸಿದೆ. ನಮ್ಮ ಸರ್ಕಾರ ರಾಜ್ಯದಲ್ಲಿ ತಮಿಳಿಗರು ಸೇರಿದಂತೆ ಎಲ್ಲ ನಾಗರಿಕರ ಸುರಕ್ಷೆ ಮತ್ತು ಭದ್ರತೆಯ ಕುರಿತಾಗಿ ಸಾಕಷ್ಟು ಕ್ರಮಕೈಗೊಂಡಿದೆ.
ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಿಕೊಳ್ಳಲು ಸಂಪೂರ್ಣ ಬದ್ಧವಾಗಿದೆ. ನೀವು ಕನ್ನಡಿಗರ ಮೇಲಿನ ಹಿಂಸಾಚಾರವನ್ನು ಸಮ್ಮತಿಸುತ್ತಿದ್ದೀರೆ? ನಮ್ಮ ರಾಜ್ಯದಲ್ಲಿ ಶಾಂತಿಗೆ ಬೆದರಿಕೆ ಉಂಟು ಮಾಡಲು ಪ್ರಚೋದನೆ ನೀಡುತ್ತಿದ್ದೀರಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ತಮಿಳುನಾಡಿನಲ್ಲಿ ಕನ್ನಡಿಗರ ಮೇಲಿನ ಹಿಂಸಾಚಾರವನ್ನು ವಾಪಸ್ ಪಡೆಯುವಂತೆ ಅಧಿಕಾರಿಗಳಿಗೆ ಆದೇಶಿಸಬೇಕು ಅವರಿಗೆ ಸೂಕ್ತ ರಕ್ಷಣೆ ಮತ್ತು ಭದ್ರತೆ ನೀಡುವಂತೆ ನಿರ್ದೇಶನ ನೀಡಬೇಕು ಎಂದು ನಿಮ್ಮಲ್ಲಿ ಮನವಿ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಪತ್ರದಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


