ಪ್ರಧಾನ ಸುದ್ದಿ

ಶಾಂತಿ ಕಾಪಾಡುವಂತೆ ಗೃಹ ಸಚಿವ ಪರಮೇಶ್ವರ್, ಸ್ಯಾಂಡಲ್‌ವುಡ್ ನಟರ ಮನವಿ

ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ನಡೆದಿರುವ ಹಲ್ಲೆ ಹಾಗೂ ಸುಪ್ರಿಂಕೋರ್ಟ್ ನ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರತಿಭಟನೆಯ ಕಾವು...

ಶಾಂತಿ ಕಾಪಾಡುವಂತೆ ಗೃಹ ಸಚಿವ ಪರಮೇಶ್ವರ್, ಸ್ಯಾಂಡಲ್‌ವುಡ್ ನಟರ ಮನವಿ
ಪರಮೇಶ್ವರ್, ಜಗ್ಗೇಶ್, ಸುದೀಪ್
Published On :
ಬೆಂಗಳೂರು: ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ನಡೆದಿರುವ ಹಲ್ಲೆ ಹಾಗೂ ಸುಪ್ರಿಂಕೋರ್ಟ್ ನ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರತಿಭಟನೆಯ ಕಾವು ಜೋರಾಗಿದ್ದು, ಜನತೆಗೆ ಶಾಂತಿ ಕಾಪಾಡುವಂತೆ ಸ್ಯಾಂಡಲ್ ವುಡ್ ನಟರು ಮನವಿ ಮಾಡಿದ್ದಾರೆ. 
ದುಷ್ಕರ್ಮಿಗಳು ಮಾಡುವ ಕೆಲಸಕ್ಕೆ ಜನ ಕಿವಿಗೊಡಬಾರದು. ಜನತೆ ಶಾಂತಿ ಕಾಪಾಡಬೇಕು ಎಂದು ಗೃಹ ಸಚಿವ ಪರಮೇಶ್ವರ್ ಮನವಿ ಮಾಡಿದ್ದಾರೆ. 
ನಟ ಜಗ್ಗೇಶ್ ಅವರು ತಮ್ಮ ಟ್ವೀಟರ್ ಮೂಲಕ ರಾಜ್ಯದ ಜನತೆಗೆ ಶಾಂತಿ ಕಾಪಾಡಲು ಮನವಿ ಮಾಡಿದ್ದಾರೆ. ಇನ್ನು ನಟ ಸುದೀಪ್ ಕೂಡ ಪರಿಸ್ಥಿತಿ ನಿಯಂತ್ರಣಕ್ಕೆ ಬರಬೇಕಿದೆ. ಜತೆಗೆ ನ್ಯಾಯವು ಬೇಕು. ಪ್ರಚೋದನಾಕಾರಿ ಸಾಲುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕದಿರಿ ಎಂದು ಮನವಿ ಮಾಡಿದ್ದಾರೆ. 
ನೀವು ಇಲ್ಲಿ ಅತಿರೇಕದಿಂದ ಮಾತಾಡಿದರೆ, ತಮಿಳುನಾಡಿನಲ್ಲಿ ಕನ್ನಡಿಗರು ತೊಂದರೆಗೆ ಒಳಗಾಗುತ್ತಾರೆ ಸ್ವಲ್ಪ ಯೋಚಿಸಿ ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.