ಪ್ರಧಾನ ಸುದ್ದಿ

ಕಾವೇರಿ ಕಿಚ್ಚು; ಪ್ರತಿಭಟನೆ, ಹಾನಿಯಾಗದಂತೆ ನೋಡಿಕೊಳ್ಳುವುದು ರಾಜ್ಯಗಳ ಕರ್ತವ್ಯ: ಸುಪ್ರೀಂ

ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ನಡೆದ ಹಿಂಸಾಚಾರವನ್ನು ಖಂಡಿಸಿರುವ ಸುಪ್ರೀಂ ಕೋರ್ಟ್,...

ಕಾವೇರಿ ಕಿಚ್ಚು; ಪ್ರತಿಭಟನೆ, ಹಾನಿಯಾಗದಂತೆ ನೋಡಿಕೊಳ್ಳುವುದು ರಾಜ್ಯಗಳ ಕರ್ತವ್ಯ: ಸುಪ್ರೀಂ
ಸುಪ್ರೀಂ ಕೋರ್ಟ್
Published On :
ನವದೆಹಲಿ: ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ನಡೆದ ಹಿಂಸಾಚಾರವನ್ನು ಖಂಡಿಸಿರುವ ಸುಪ್ರೀಂ ಕೋರ್ಟ್, ಯಾವುದೇ ಪ್ರತಿಭಟನೆ ಮತ್ತು ಹಾನಿಯಾಗದಂತೆ ನೋಡಿಕೊಳ್ಳುವುದು ರಾಜ್ಯ ಸರ್ಕಾರಗಳ ಕರ್ತವ್ಯ ಎಂದು ಗುರುವಾರ ಹೇಳಿದೆ.
ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಉಂಟಾದ ಹಿಂಸಾಚಾರ ಕುರಿತಂತೆ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಜನತೆ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಮತ್ತು ಹಿಂಸಾಚಾರ ತಡೆಯಲು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ಉಭಯ ರಾಜ್ಯಗಳ ಅಧಿಕಾರಿಗಳ ಜವಾಬ್ದಾರಿ ಎಂದು ಹೇಳಿದೆ.
ಎರಡೂ ರಾಜ್ಯಗಳ ಜನತೆ ಶಾಂತಿ, ಸೌಹಾರ್ದತೆಯನ್ನು ಕಾಪಾಡಬೇಕು ಮತ್ತು ಕಾನೂನನ್ನು ಗೌರವಿಸಬೇಕು ಎಂದು ಹೇಳಿ ವಿಚಾರಣೆಯನ್ನು ಸೆಪ್ಟೆಂಬರ್ 20ಕ್ಕೆ ಮುಂದೂಡಿದೆ.
ತಮಿಳುನಾಡಿಗೆ ನಿತ್ಯ 12 ಸಾವಿರ ಕ್ಯೂಸೆಕ್ಸ್ ನೀರು ಬಿಡಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದ ನಂತರ ಬೆಂಗಳೂರು ಹಾಗೂ ರಾಜ್ಯದ ಇತರ ಕಡೆ ಭಾರಿ ಹಿಂಸಾಚಾರ ಘಟನೆಗಳು ನಡೆದಿದ್ದವು. ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. ಅಲ್ಲದೆ ಕಾವೇರಿ ಕಿಚ್ಚು ಇಬ್ಬರನ್ನು ಬಲಿ ಪಡೆದಿತ್ತು.
ಕಾವೇರಿ ವಿವಾದ ಸಂಬಂಧ ಸುಪ್ರೀಂಕೋರ್ಟ್ ಆದೇಶ ಹೊರಡಿಸುತ್ತಿದ್ದಂತೆ ಎರಡು ರಾಜ್ಯಗಳಲ್ಲೂ ಹಿಂಸಾತ್ಮಕ ಘಟನೆಗಳು ನಡೆದಿದ್ದವು. ಈ ಹಿನ್ನೆಲೆಯಲ್ಲಿ ಕನ್ಯಾಕುಮಾರಿ ಮೂಲದ ಹೋರಾಗಾರರೊಬ್ಬರು ಹಿಂಸಾಚಾರದಲ್ಲಿ ಭಾಗಿಯಾದ ರಾಜ್ಯಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.