ಪ್ರಧಾನ ಸುದ್ದಿ

ಗಣಪತಿ ಆತ್ಮಹತ್ಯೆ ಪ್ರಕರಣ: ಕೆ.ಜೆ.ಜಾರ್ಜ್‌, ಎ.ಎಂ.ಪ್ರಸಾದ್, ಪ್ರಣಬ್‌ ಮೊಹಾಂತಿಗೆ ಸಿಐಡಿ ಕ್ಲೀನ್ ಚಿಟ್

ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಮಾಜಿ ಸಚಿವ ಕೆ.ಜೆ.ಜಾರ್ಜ್...

ಗಣಪತಿ ಆತ್ಮಹತ್ಯೆ ಪ್ರಕರಣ: ಕೆ.ಜೆ.ಜಾರ್ಜ್‌, ಎ.ಎಂ.ಪ್ರಸಾದ್, ಪ್ರಣಬ್‌ ಮೊಹಾಂತಿಗೆ ಸಿಐಡಿ ಕ್ಲೀನ್ ಚಿಟ್
ಕೆ.ಜೆ.ಜಾರ್ಜ್‌
Published On :
ಮಡಿಕೇರಿ: ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಮಾಜಿ ಸಚಿವ ಕೆ.ಜೆ.ಜಾರ್ಜ್ ಹಾಗೂ ಇತರೆ ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ಸಿಐಡಿ ಕ್ಲೀನ್ ಚಿಟ್ ನೀಡಿದೆ.
ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಿದ ಸಿಐಡಿ ಪೊಲೀಸರು ಶನಿವಾರ ಮಡಿಕೇರಿ ಕೋರ್ಟ್‌ಗೆ ಬಿ ರಿಪೋರ್ಟ್ ಸಲ್ಲಿಸಿದ್ದು, ಮಾಜಿ ಸಚಿವ ಕೆ.ಜೆ.ಜಾರ್ಜ್, ಲೋಕಾಯುಕ್ತ ಐಜಿಪಿಯಾಗಿದ್ದ ಪ್ರಣಬ್‌ ಮೊಹಾಂತಿ ಹಾಗೂ ಗುಪ್ತಚರ ವಿಭಾಗದ ಎಡಿಜಿಪಿಯಾಗಿದ್ದ ಎ.ಎಂ.ಪ್ರಸಾದ್ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದೆ.
ಗಣಪತಿ ಆತ್ಮಹತ್ಯೆ ಪ್ರಕರಣದ ಅಂತಿಮ ವರದಿಯನ್ನು ಸೆಪ್ಟೆಂಬರ್ 19ರೊಳಗೆ ಸಲ್ಲಿಸಬೇಕು ಎಂದು ಮಡಿಕೇರಿ ಕೋರ್ಟ್ ಸಿಐಡಿಗೆ ಸೂಚನೆ ನೀಡಿತ್ತು. ಎರಡು ದಿನ ಮೊದಲೇ ಅಂದರೆ ಸೆ.17ರಂದು ಸಿಐಡಿ ಅಧಿಕಾರಿಗಳು ಕೋರ್ಟ್‌ಗೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ.
ಮಂಗಳೂರು ಡಿವೈಎಸ್ಪಿಯಾಗಿದ್ದ ಗಣಪತಿಯವರು ಜುಲೈ 7ರಂದು ಮಡಿಕೇರಿಯ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಖಾಸಗಿ ವಾಹನಿಯೊಂದಕ್ಕೆ ಸಂದರ್ಶನವೊಂದನ್ನು ನೀಡಿದ್ದರು. ಸಂದರ್ಶನದಲ್ಲಿ ನನಗೇನಾದರೂ ಆದರೆ  ಕೆ.ಜೆ.ಜಾರ್ಜ್, ಎಡಿಜಿಪಿ ಎ.ಎಂ. ಪ್ರಸಾದ್ ಮತ್ತು ಲೋಕಾಯುಕ್ತ ಐಜಿಪಿ ಪ್ರಣಬ್ ಮೊಹಾಂತಿಯವರೇ ನೇರಹೊಣೆಯಾಗಿರುತ್ತಾರೆಂದು ಹೇಳಿದ್ದರು.
ಈ ಪ್ರಕರಣ ರಾಜ್ಯದಾದ್ಯಂತ ಸಾಕಷ್ಟು ವಿವಾದ ಹಾಗೂ ಚರ್ಚೆಯನ್ನು ಹುಟ್ಟುಹಾಕಿತ್ತು. ಬಳಿಕ ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.