ತಮಿಳುನಾಡಿಗೆ ಹರಿಯುತ್ತಿದ್ದ ಕಾವೇರಿ ನೀರು ದಿಢೀರ್ ಸ್ಥಗಿತ, ಮತ್ತೆ ಬಿಡುಗಡೆ!
ಅಚ್ಚರಿಯ ಬೆಳವಣಿಗೆಯೊಂದರಲ್ಲಿ ತಮಿಳುನಾಡಿಗೆ ಕಳೆದ ಹಲವು ದಿನಗಳಿಂದ ಹರಿಯುತ್ತಿದ್ದ ಕಾವೇರಿ ನದಿ ನೀರನ್ನು ಕರ್ನಾಟಕ ಸರ್ಕಾರ ಭಾನುವಾರ ಸ್ಥಗಿತಗೊಳಿಸಿ ಮತ್ತೆ ಬಿಡುಗಡೆ ಮಾಡಿದೆ ಎಂದು ತಿಳಿದುಬಂದಿದೆ.

ಮಂಡ್ಯ: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ತಮಿಳುನಾಡಿಗೆ ಕಳೆದ ಹಲವು ದಿನಗಳಿಂದ ಹರಿಯುತ್ತಿದ್ದ ಕಾವೇರಿ ನದಿ ನೀರನ್ನು ಕರ್ನಾಟಕ ಸರ್ಕಾರ ಭಾನುವಾರ ಸ್ಥಗಿತಗೊಳಿಸಿ ಬಳಿಕ ಮತ್ತೆ ಬಿಡುಗಡೆ ಮಾಡಿದೆ ಎಂದು ತಿಳಿದುಬಂದಿದೆ.
ಕರ್ನಾಟಕದ ಕೆಆರ್ ಎಸ್, ಕಬಿನಿ ಹಾಗೂ ಹಾರಂಗಿ ಜಲಾಶಯಗಳ ಮೂಲಕ ತಮಿಳುನಾಡಿಗೆ ಹರಿಯುತ್ತಿದ್ದ ಕಾವೇರ ನದಿ ನೀರನ್ನು ಇಂದು ಮಧ್ಯಾಹ್ನದಿಂದ ಸ್ಥಗಿತಗೊಳಿಸಲಾಗಿತ್ತು. ಆದರೆ ಒಂದೂವರೆ ಗಂಟೆ ಬಳಿಕ ಮತ್ತೆ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಆದರೆ ನೀರು ದಿಢೀರ್ ಸ್ಥಗಿತಗೊಳ್ಳಲು ಕಾರಣವೇನು ಎಂದು ತಿಳಿದುಬಂದಿಲ್ಲ.
ಇನ್ನು ಜಲಾಶಯದಲ್ಲಿ ನೀರಿನ ಮಟ್ಟ ಕುಸಿಯುತ್ತಿರುವ ಹಿನ್ನಲೆಯಲ್ಲಿ ಮಂಡ್ಯ ಜಿಲ್ಲೆಯ ವಿವಿಧ ನಾಲೆಗಳಿಗೆ ಹರಿಸುತ್ತಿದ್ದ ನೀರನ್ನು ನಿನ್ನೆಯಿಂದಲೇ ಸ್ಥಗಿತಗೊಳಿಸಲಾಗಿತ್ತು.
ಇದೇ ಸೆಪ್ಟೆಂಬರ್ 20ಕ್ಕೆ ಕಾವೇರಿ ಉಸ್ತುವಾರಿ ಸಭೆ ನಡೆಯಲಿದ್ದು, ಕಳೆದ ಬಾರಿಯ ವಿಚಾರಣೆಯಲ್ಲಿ ಸುಪ್ರೀಂ ಕೋರ್ಚ್ ಸೆಪ್ಟೆಂಬರ್ 20ರವರೆಗೂ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶಿಸಿತ್ತು. ಆದರೆ ರಾಜ್ಯ ಸರ್ಕಾರ ಇನ್ನೂ ಎರಡು ದಿನ ಬಾಕಿ ಇರುವಂತೆಯೇ ತಮಿಳುನಾಡಿಗೆ ನೀರು ಸ್ಥಗಿತ ಮಾಡಿತ್ತು. ಆದರೆ ಬಳಿಕ ಬದಲಾದ ಪರಿಸ್ಥಿತಿಯಲ್ಲಿ ಮತ್ತೆ ಕಾವೇರಿ ನದಿ ನೀರು ತಮಿಳುನಾಡಿಗೆ ಹರಿಸಲಾಗುತ್ತಿದೆ.
ನಾಳೆ ಕಾವೇರಿ ಮೇಲುಸ್ತುವಾರಿ ಸಭೆ ನಡೆಯಲಿದ್ದು, ಸಭೆಯಲ್ಲಿ ಜಲಾಶಯಗಳ ಈಗಿನ ಪರಿಸ್ಥಿತಿ ಹಾಗೂ ರೈತರ ಬೇಡಿಕೆಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆಗಳಿವೆ.
ಈ ಹೊತ್ತಿನಲ್ಲಿ ಕರ್ನಾಟಕದ ಸರ್ಕಾರದ ಈ ಅಚ್ಚರಿ ನಿರ್ಧಾರ ಇದೇ ಸೆಪ್ಟೆಂಬರ್ 20ರಂದು ನಡೆಯಲಿರುವ ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ಎಂತಹ ಪರಿಣಾಮ ಬೀರಲಿದೆ ಎಂಬುದನ್ನು ಕಾದು ನೋಡಬೇಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


