ಉರಿ ಉಗ್ರ ದಾಳಿ ಸಂಬಂಧ ಪ್ರತಿಕ್ರಿಯಿಸಲ್ಲ: ಪಾಕ್ ಪ್ರಧಾನಿ ನವಾಜ್ ಷರೀಫ್
18 ಭಾರತೀಯ ಯೋಧರ ಸಾವಿಗೆ ಕಾರಣವಾದ ಉರಿ ಉಗ್ರ ದಾಳಿ ಕುರಿತು ತಾವು ಯಾವುದೇ ರೀತಿಯ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಹೇಳಿದ್ದಾರೆ.

ನ್ಯೂಯಾರ್ಕ್: 18 ಭಾರತೀಯ ಯೋಧರ ಸಾವಿಗೆ ಕಾರಣವಾದ ಉರಿ ಉಗ್ರ ದಾಳಿ ಕುರಿತು ತಾವು ಯಾವುದೇ ರೀತಿಯ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಹೇಳಿದ್ದಾರೆ.
ನ್ಯೂಯಾರ್ಕ್ ನಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆ ಸಾಮಾನ್ಯಸಭೆಯಲ್ಲಿ ಪಾಲ್ಗೊಂಡಿರುವ ನವಾಜ್ ಷರೀಫ್ ಸೋಮವಾರ ದ್ವಿಪಕ್ಷೀಯ ಚರ್ಚೆಯಲ್ಲಿ ಪಾಲ್ಗೊಂಡಿದ್ದರು. ಸಭೆಯಲ್ಲಿ ಪಾಲ್ಗೊಳ್ಳಲು ಕೊಠಡಿಗೆ ತೆರಳುತ್ತಿದ್ದ ಅವರನ್ನು ಕೆಲ ಪತ್ರಕರ್ತರು ಉರಿ ಉಗ್ರ ದಾಳಿ ಕುರಿತು ಪ್ರಶ್ನಿಸಿದ್ದಾರೆ. ಈ ವೇಳೆ ನಕಾರ ವ್ಯಕ್ತಪಡಿಸಿದ ಅವರು ಪ್ರಕರಣ ಸಂಬಂಧ ತಾವು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿ ಹೋಗಿದ್ದಾರೆ.
ಇದಕ್ಕೂ ಮೊದಲು ನಡೆದ ಸುದ್ದಿಗೋಷ್ಠಿಯಲ್ಲೂ ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿ ಎಜಾಜ್ ಅಹ್ಮದ್ ಚೌದರಿ ಅವರೂ ಕೂಡ ಉರಿ ಉಗ್ರ ದಾಳಿ ಸಂಬಂಧ ಪ್ರತಿಕ್ರಿಯಿಸಲು ನಿರಾಕರಿಸಿದರು. ಅಲ್ಲದೆ ಭಾರತೀಯ ಪತ್ರಕರ್ತರನ್ನು ಸುದ್ದಿಗೋಷ್ಠಿಯಿಂದ ಹೊರಗಟ್ಟುವ ಮೂಲಕ ಉದ್ಧಟತನ ಪ್ರದರ್ಶಿಸಿದ್ದರು.
ವಿಶ್ವಸಂಸ್ಥೆ ಸಾಮಾನ್ಯಸಭೆಯಲ್ಲಿ ಪಾಲ್ಗೊಳ್ಳಲು ನ್ಯೂಯಾರ್ಕ್ ಗೆ ಆಗಮಿಸಿರುವ ನವಾಜ್ ಷರೀಫ್ ಅವರು, ಇಂದು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಜಾನ್ ಕೆರ್ರಿ ಅವರನ್ನು ಭೇಟಿ ಮಾಡಲಿದ್ದಾರೆ. ಈ ವೇಳೆ ನವಾಜ್ ಷರೀಫ್ ಅವರು ಕಾಶ್ಮೀರ ವಿಚಾರವನ್ನು ಪ್ರಸ್ತಾಪಿಸಲಿದ್ದು, ಬಳಿಕ ನ್ಯೂಜಿಲೆಂಡ್ ಪ್ರಧಾನಿಯನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


