ಪ್ರಧಾನ ಸುದ್ದಿ

ಯಾವುದೇ ಕಾರಣಕ್ಕೂ ನೀರು ಬಿಡಬೇಡಿ: ಸಿಎಂಗೆ ಮಾಜಿ ಪ್ರಧಾನಿ ದೇವೇಗೌಡರ ಸಲಹೆ

ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬೇಡಿ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಬುಧವಾರ...

ಯಾವುದೇ ಕಾರಣಕ್ಕೂ ನೀರು ಬಿಡಬೇಡಿ: ಸಿಎಂಗೆ ಮಾಜಿ ಪ್ರಧಾನಿ ದೇವೇಗೌಡರ ಸಲಹೆ
ಸಿದ್ದರಾಮಯ್ಯ - ಎಚ್.ಡಿ.ದೇವೇಗೌಡ
Published On :
ಬೆಂಗಳೂರು: ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬೇಡಿ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಬುಧವಾರ ತಮ್ಮನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದ್ದಾರೆ.
ತಮಿಳುನಾಡಿಗೆ ಮತ್ತೆ 42 ಸಾವಿರ ಕ್ಯೂಸೆಕ್ ನೀರು ಬಿಡಬೇಕು ಎಂದು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಇಂದು ದೇವೇಗೌಡರನ್ನು ಭೇಟಿ ಮಾಡಿ, ಕೋರ್ಟ್ ಆದೇಶ ಹಾಗೂ ರಾಜ್ಯ ಸರ್ಕಾರ ಮುಂದೆ ಕೈಗೊಳ್ಳಬೇಕಾದ ನಿರ್ಧಾರಗಳ ಬಗ್ಗೆ ಚರ್ಚಿಸಿದರು. 
ಈ ವೇಳೆ ರಾಜ್ಯದ ಪಾಲಿಗೆ ಇದು ನಿಜಕ್ಕೂ ಸಂಕಷ್ಟದ ಸಮಯ. ಕಾವೇರಿ ವಿಚಾರದಲ್ಲಿ ನಾನು ರಾಜಕೀಯ ಮಾಡುವುದಿಲ್ಲ. ಯಾವುದೇ ಕಾರಣಕ್ಕೂ ನೀವು ನೀರು ಬಿಡಬೇಡಿ. ನೀರು ಬಿಡದಿದ್ದರೆ ನ್ಯಾಯಾಂಗ ನಿಂದನೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕ್ರಮಕ್ಕೆ ಮುಂದಾಗಬಹುದು. ಆದರೆ ಯಾವುದೇ ಕ್ರಮ ಎದುರಿಸಲು ನೀವು ಸಜ್ಜಾಗಿರಿ ಎಂದು ಸಿಎಂಗೆ ಮಾಜಿ ಪ್ರಧಾನಿ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ದೇವೇಗೌಡರ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕೋರ್ಟ್ ಆದೇಶ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚಿಸಿದ್ದೇವೆ ಎಂದರು.
ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ಪದ್ಮನಾಭನಗರದಲ್ಲಿರುವ ದೇವೇಗೌಡರ ಮನೆಗೆ ತೆರಳಿ, ಕಾವೇರಿ ವಿಚಾರದ ಬಗ್ಗೆ ಚರ್ಚೆ ನಡೆಸಿದರು.
ಸಿದ್ದರಾಮಯ್ಯ ಅವರ ಜತೆ ಲೋಕೋಪಯೋಗಿ ಸಚಿವ ಡಾ.ಎಚ್ ಸಿ ಮಹದೇವಪ್ಪ, ರಾಜ್ಯದ ಪರ ವಕೀಲ ಮೋಹನ್ ಕಾತರಿಕಿ ಅವರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.