ಪ್ರಧಾನ ಸುದ್ದಿ

ಕಾವೇರಿ ಕಿಚ್ಚು: ರಾಜ್ಯಪಾಲರನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

ನಿನ್ನೆಯಷ್ಟೇ ಸುಪ್ರೀಂ ಕೋರ್ಟ್ ಆದೇಶವನ್ನು ಧಿಕ್ಕರಿಸಿ, ತಮಿಳುನಾಡಿಗೆ ನೀರು ಬಿಡದಿರಲು ನಿರ್ಧರಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ...

ಕಾವೇರಿ ಕಿಚ್ಚು: ರಾಜ್ಯಪಾಲರನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ
ವಜುಭಾಯಿ ವಾಲಾ - ಸಿದ್ದರಾಮಯ್ಯ
Published On :
ಬೆಂಗಳೂರು: ನಿನ್ನೆಯಷ್ಟೇ ಸುಪ್ರೀಂ ಕೋರ್ಟ್ ಆದೇಶವನ್ನು ಧಿಕ್ಕರಿಸಿ, ತಮಿಳುನಾಡಿಗೆ ನೀರು ಬಿಡದಿರಲು ನಿರ್ಧರಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿ, ಸರ್ಕಾರದ ನಿಲುವು ತಿಳಿಸಿದ್ದಾರೆ.
ಇಂದು ಬೆಳಗ್ಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಿ ಸಿಎಂ, ಕಾವೇರಿ ಬಿಕ್ಕಟ್ಟಿನ ಬಗ್ಗೆ ಚರ್ಚಿಸಿ, ಮುಂದಿನ ನಿರ್ಧಾರ ತೆಗೆದುಕೊಳ್ಳಲು ಶುಕ್ರವಾರ ವಿಶೇಷ ಅಧಿವೇಶನ ಕರೆಯುವಂತೆ ಮನವಿ ಮಾಡಿದ್ದಾರೆ.
ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸೇರಿದಂತೆ ನಿನ್ನೆ ನಡೆದ ಸರ್ವ ಪಕ್ಷ ಸಭೆಯಲ್ಲಿ ಭಾಗವಹಿಸಿದ್ದ ಹಲವು ನಾಯಕರು ತಮಿಳುನಾಡಿಗೆ ನೀರು ಬಿಡದಂತೆ ಮತ್ತು ಈ ಸಂಬಂಧ ಚರ್ಚಿಸಲು ವಿಶೇಷ ಅಧಿವೇಶನ ಕರೆಯುವಂತೆ ಸರ್ಕಾರಕ್ಕೆ ಸಲಹೆ ನೀಡಿರುವುದಾಗಿ ಸಿಎಂ ರಾಜ್ಯಪಾಲರಿಗೆ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ನಿತ್ಯ 6 ಸಾವಿರ ಕ್ಯೂಸೆಕ್ ನಂತೆ ಒಟ್ಟು ಏಳು ದಿನ ತಮಿಳುನಾಡಿಗೆ ನೀರುಹರಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿತ್ತು. ಆದರೆ  ಈ ಆದೇಶ ಪಾಲಿಸಲು ಸಾಧ್ಯವಾಗದ ಸ್ಥಿತಿಯಲ್ಲಿದ್ದ ರಾಜ್ಯ ಸರ್ಕಾರ ಮುಂದೆ ಕೈಗೊಳ್ಳಬೇಕಾದ ನಿರ್ಧಾರಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಹಾಗೂ ಸರ್ವಪಕ್ಷ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ ಅಂತಿಮವಾಗಿ ನೀರು ಬಿಡದಿರಲು ನಿರ್ಧರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.