ಪ್ರಧಾನ ಸುದ್ದಿ

ತಜ್ಞರ ತಂಡ ಕಳುಹಿಸುವ ಕರ್ನಾಟಕದ ಸಲಹೆಗೆ ತಮಿಳುನಾಡು ಒಪ್ಪಿಲ್ಲ: ಉಮಾ ಭಾರತಿ

ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೂಚನೆಯಂತೆ ಕೇಂದ್ರ ಸರ್ಕಾರದ ಮಧ್ಯಸ್ಥಿಕೆಯಲ್ಲಿ ನಾವು ಕರ್ನಾಟಕ...

ತಜ್ಞರ ತಂಡ ಕಳುಹಿಸುವ ಕರ್ನಾಟಕದ ಸಲಹೆಗೆ ತಮಿಳುನಾಡು ಒಪ್ಪಿಲ್ಲ: ಉಮಾ ಭಾರತಿ
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಮಾ ಭಾರತಿ ಹಾಗೂ ತಮಿಳುನಾಡು ಸಚಿವ ಪಳನಿಸ್ವಾಮಿ
Published On :
ನವದೆಹಲಿ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೂಚನೆಯಂತೆ ಕೇಂದ್ರ ಸರ್ಕಾರದ ಮಧ್ಯಸ್ಥಿಕೆಯಲ್ಲಿ ನಾವು ಕರ್ನಾಟಕ ಮತ್ತು ತಮಿಳುನಾಡು ಸರ್ಕಾರದೊಂದಿಗೆ ಸಭೆ ನಡೆಸಿದ್ದು, ಕೋರ್ಟ್ ನಿಂದ ಹೊರಗಡೆ ಸಂಧಾನ ಪ್ರಯತ್ನ ನಡೆದಿದೆ ಎಂದು ಕೇಂದ್ರ ಜಲ ಸಂಪನ್ಮೂಲ ಸಚಿವೆ ಉಮಾ ಭಾರತಿ ಅವರು ಗುರುವಾರ ಹೇಳಿದ್ದಾರೆ.
ಉಭಯ ರಾಜ್ಯಗಳೊಂದಿಗೆ ಇಂದು ದೆಹಲಿಯ ಶ್ರಮಶಕ್ತಿ ಭವನದಲ್ಲಿ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಉಮಾ ಭಾರತಿ, ನೀರಿನ ವಿಷಯದಲ್ಲಿ ಯಾವುದೇ ರಾಜಕೀಯ ಮಾಡುವುದು ಬೇಡ. ಎರಡು ರಾಜ್ಯಗಳು ಶಾಂತಿಯುತವಾಗಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಯಾವುದೇ ರಾಜ್ಯದಲ್ಲಿ ಅಹಿತಕರ ಘಟನೆ ನಡೆಯಬಾರದು. ಒಂದು ವೇಳೆ ಗಲಾಟೆ, ಹಿಂಸಾಚಾರ ನಡೆದರೆ ನಾನು ಉಪವಾಸ ಸತ್ಯಾಗ್ರಹ ಮಾಡುತ್ತೇನೆ ಎಂದು ಎಚ್ಚರಿಸಿದರು. ಆದರೆ ಇದು ಬೆದರಿಕೆಯಲ್ಲಿ  ಮನವಿ ಅಷ್ಟೆ ಎಂದು ನಂತರ ಸ್ಪಷ್ಟಪಡಿಸಿದರು.
ಸಭೆಯಲ್ಲಿ ರಾಜ್ಯದ ಜಲಾಶಯಗಳಲ್ಲಿನ ನೀರಿನ ಪ್ರಮಾಣವನ್ನು ತಿಳಿಯಲು ತಜ್ಞರ ತಂಡ ಕುಳಹಿಸುವಂತೆ ಕರ್ನಾಟಕ ಸಲಹೆ ನೀಡಿತು. ಆದರೆ ಇದಕ್ಕೆ ತಮಿಳುನಾಡು ಒಪ್ಪಿಗೆ ನೀಡಿಲ್ಲ ಎಂದು ಉಮಾ ಭಾರತಿ ತಿಳಿಸಿದರು.
ಇದೇ ವೇಳೆ ಇಂದಿನ  ಸಭೆಯ ಎಲ್ಲಾ ವಿವವರಗಳನ್ನು ಅಟಾರ್ನಿ ಜನರಲ್ ಮೂಲಕ ಸುಪ್ರೀಂ ಕೋರ್ಟ್ ಗೆ ಸಲ್ಲಿಸಲಾಗುವುದು ಎಂದು ಕೇಂದ್ರ ಸಚಿವೆ ತಿಳಿಸಿದ್ದಾರೆ.
ಇನ್ನು ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅರವಿಂದ್ ಜಾದವ್ ಅವರು, ತಜ್ಞರ ತಂಡ ಕಳುಹಿಸುವಂತೆ ಕರ್ನಾಟಕ ಮನವಿ ಮಾಡಿದೆ. ಆದರೆ ಕೇಂದ್ರ ಸರ್ಕಾರ ಇಂದು ಯಾವುದೇ ನಿರ್ಧಾರ ಪ್ರಕಟಿಸಿಲ್ಲ. ನಾಳೆ ಸುಪ್ರೀಂ ಕೋರ್ಟ್ ಗೆ ತಿಳಿಸಲಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.