ಪ್ರಧಾನ ಸುದ್ದಿ

ಆಸ್ಪತ್ರೆಗೆ ಭೇಟಿ ನೀಡಿ, ಜಯಲಲಿತಾ ಆರೋಗ್ಯ ವಿಚಾರಿಸಿದ ಹಂಗಾಮಿ ರಾಜ್ಯಪಾಲ ವಿದ್ಯಾಸಾಗರ್

ತಮಿಳುನಾಡು ಹಂಗಾಮಿ ರಾಜ್ಯಪಾಲ ಸಿ,ಎಚ್, ವಿದ್ಯಾಸಾಗರ್ ರಾವ್ ಅವರು ಶನಿವಾರ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ...

ಆಸ್ಪತ್ರೆಗೆ ಭೇಟಿ ನೀಡಿ, ಜಯಲಲಿತಾ ಆರೋಗ್ಯ ವಿಚಾರಿಸಿದ ಹಂಗಾಮಿ ರಾಜ್ಯಪಾಲ ವಿದ್ಯಾಸಾಗರ್
ಜಯಲಲಿತಾ
Published On :
ಚೆನ್ನೈ: ತಮಿಳುನಾಡು ಹಂಗಾಮಿ ರಾಜ್ಯಪಾಲ ಸಿ,ಎಚ್, ವಿದ್ಯಾಸಾಗರ್ ರಾವ್ ಅವರು ಶನಿವಾರ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರನ್ನು ಭೇಟಿ ಮಾಡಿ, ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ.
ಸುಮಾರು 35 ನಿಮಿಷಗಳ ಕಾಲ ಆಸ್ಪತ್ರೆಯಲ್ಲಿದ್ದ ವಿದ್ಯಾಸಾಗರ್ ರಾವ್ ಅವರು ಜಯಲಲಿತಾ ಅವರ ಆರೋಗ್ಯದ ಬಗ್ಗೆ ಹಾಗೂ ಅವರಿಗೆ ನೀಡಲಾಗುತ್ತಿರುವ ಚಿಕಿತ್ಸೆಯ ಬಗ್ಗೆ ವಿವರಣೆ ಪಡೆದಿದ್ದಾರೆ.  ಈ ವೇಳೆ ವಿಧಾನಸಭೆ ಸ್ಪೀಕರ್ ಪಿ.ಧನಪಾಲ್ ಹಾಗೂ ಹಿರಿಯ ಸಚಿವರು ಸಹ ಉಪಸ್ಥಿತರಿದ್ದರು.
ರಾಜ್ಯಪಾಲರು ಆಸ್ಪತ್ರೆಗೆ ಭೇಟಿ ನೀಡಿದ ವೇಳೆ ಎಐಎಡಿಎಂಕೆ ಸಾವಿರಾರು ಕಾರ್ಯಕರ್ತರು ಜಮಾಯಿಸಿದ್ದರಿಂದ ಆಸ್ಪತ್ರೆ ಸುತ್ತ ಭಾರಿ ಭದ್ರತೆ ಏರ್ಪಡಿಸಲಾಗಿತ್ತು.
ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಎಐಎಡಿಎಂ ವಕ್ತಾರ ಪಿ.ಎಸ್.ರಾಮಚಂದ್ರನ್ ಅವರು, ಡಾ.ರಿಚರ್ಡ್ ಬೀಲೆ ಅವರು ಮುಖ್ಯಮಂತ್ರಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ ಎಂದರು. ಜಯಲಲಿತಾ ಅವರ ಫೋಟೋ ಬಿಡುಗಡೆ ಮಾಡುತ್ತೀರಾ ಎಂಬ ವರದಿಗಾರರ ಪ್ರಶ್ನೆ ಪ್ರತಿಕ್ರಿಯಿಸಿದ ರಾಮಚಂದ್ರನ್, ಅದರ ಅಗತ್ಯ ಇಲ್ಲ ಎಂದರು.
ಜಯಲಲಿತಾ ಅವರು ಕಳೆದ ಸೆಪ್ಟೆಂಬರ್ 22ರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.