ನೀರು ಬಿಡದಂತೆ, ನಿರ್ವಹಣಾ ಮಂಡಳಿಗೆ ಸದಸ್ಯರ ನೇಮಕ ಮಾಡದಂತೆ ಸರ್ವಪಕ್ಷ ಸಭೆ ನಿರ್ಣಯ
ಯಾವುದೇ ಕಾರಣಕ್ಕೂ ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಹಾಗೂ ಕಾವೇರಿ ನೀರು...

Published On :
ಬೆಂಗಳೂರು: ಯಾವುದೇ ಕಾರಣಕ್ಕೂ ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಹಾಗೂ ಕಾವೇರಿ ನೀರು ನಿರ್ವಹಣಾ ಮಂಡಳಿಗೆ ರಾಜ್ಯದ ಸದಸ್ಯರನ್ನು ನೇಮಕ ಮಾಡದಂತೆ ಸರ್ಪಪಕ್ಷ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ತಮಿಳುನಾಡಿಗೆ ಮತ್ತೆ 36 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿರುವ ಹಿನ್ನೆಲೆಯಲ್ಲಿ ಇಂದು ವಿಧಾಸೌಧಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆಸಲಾಯಿತು.
ಸಭೆಯಲ್ಲಿ ಕಾವೇರಿ ನಿರ್ವಹಣಾ ಮಂಡಳಿಗೆ ರಚನೆಗೆ ರಾಜ್ಯ ಸರ್ಕಾರ ಹಾಗೂ ಪ್ರತಿಪಕ್ಷಗಳ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಮಂಡಳಿಗೆ ಸದಸ್ಯರ ನೇಮಕ ಮಾಡದಿರಲು ಒಕ್ಕೊರಲ ನಿರ್ಣಯ ಕೈಗೊಳ್ಳಲಾಗಿದೆ.
ಸುಪ್ರೀಂಕೋರ್ಟ್ ನೀಡಿರುವ ಎರಡು ಆದೇಶಗಳ ಮರುಪರಿಶೀನೆಗೆ ಮನವಿ ಸಲ್ಲಿಸುವುದು ಹಾಗೂ ತಮಿಳುನಾಡಿಗೆ ನೀರು ಬಿಡದಂತೆ ಸಿದ್ದರಾಮಯ್ಯ ಅವರಿಗೆ ಸರ್ವಪಕ್ಷಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸಚಿವರಾದ ಡಿವಿ ಸದಾನಂದ ಗೌಡ, ಅವರು ಸಲಹೆ ನೀಡಿದ್ದಾರೆ.
ಇನ್ನು ಸರ್ವಪಕ್ಷ ಸಭೆಯ ನಂತರ ಸುದ್ದಿಗಾರರೊಂದಿಗೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು, ನಾವು ಸರ್ಕಾರದ ಬೆಂಬಲಕ್ಕೆ ನಿಂತಿದ್ದು, ನೀರು ಬಿಡದಂತೆ ವಿಧಾನಮಂಡಲದ ವಿಶೇಷ ಅಧಿವೇಶನ ತೆಗೆದುಕೊಂಡ ನಿರ್ಧಾರಕ್ಕೆ ಬದ್ಧರಾಗಿರುವಂತೆ ಸಿಎಂಗೆ ಒತ್ತಾಯಿಸಿದ್ದೇವೆ ಎಂದರು. ಅಲ್ಲದೆ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಮಾಡುವುದು ಬೇಡ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಒತ್ತಡ ಹೇರಲು ಬಿಜೆಪಿ ಸಿದ್ಧವಿರುವುದಾಗಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


